Monday, June 8, 2026
Homeಅಪರಾಧನಾಳೆ ದೇಶಾದ್ಯಂತ ಟ್ರೈನಿ ವೈದ್ಯೆಯ ಅತ್ಯಾಚಾರ ಕೊಲೆ ಖಂಡಿಸಿ ವೈದ್ಯರ ಮುಷ್ಕರ; ಈ ಎಲ್ಲಾ ವೈದ್ಯಕೀಯ ಸೇವೆಗಳು...

ನಾಳೆ ದೇಶಾದ್ಯಂತ ಟ್ರೈನಿ ವೈದ್ಯೆಯ ಅತ್ಯಾಚಾರ ಕೊಲೆ ಖಂಡಿಸಿ ವೈದ್ಯರ ಮುಷ್ಕರ; ಈ ಎಲ್ಲಾ ವೈದ್ಯಕೀಯ ಸೇವೆಗಳು ಬಂದ್

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಅದೇ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆ.17 ರ ಬೆಳ್ಳಿಗಿನಿಂದ ಆ.18ರ ಬೆಳ್ಳಿಗೆಯವರೆಗೆ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ವೈದ್ಯಕೀಯ ಸೇವೆಗಳನ್ನು ಬಂದ್ ಮಾಡುವುದಾಗಿ ಭಾರತೀಯ ವೈದ್ಯಕೀಯ ಸಂಘ ಘೋಷಿಸಿದೆ.

ಆಗಸ್ಟ್ 16 ಶುಕ್ರವಾರದಂದು ಕೋಲ್ಕತ್ತವು ರಾಜಕೀಯ ಪ್ರತಿಭಟನೆಗಳು, ಮತ್ತು ರ್‍ಯಾಲಿಗಳಿಗೆ ಸಾಕ್ಷಿಯಾಗಲಿದೆ. ಬಿಜೆಪಿಯ ಮಹಿಳಾ ಘಟಕವು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಕ್ಯಾಂಡಲ್ ಮಾರ್ಚ್ ನಡೆಸಲಿದೆ. ಅಲ್ಲದೆ ಪಶ್ಚಿಮ ಬಂಗಾಳದಲ್ಲಿ 12 ಗಂಟೆಗಳ ಸಾರ್ವತ್ರಿಕ ಮುಷ್ಕರಕ್ಕೆ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕರೆ ನೀಡಿದೆ.

ಈ ರ್‍ಯಾಲಿಯಲ್ಲಿ ಬಿಜೆಪಿಯ ಮಹಿಳಾ ಘಟಕವು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಕ್ಯಾಂಡಲ್ ಮಾರ್ಚ್ ನಡೆಸಲಿದೆ. ಅಲ್ಲದೆ ಪಶ್ಚಿಮ ಬಂಗಾಳದಲ್ಲಿ 12 ಗಂಟೆಗಳ ಸಾರ್ವತ್ರಿಕ ಮುಷ್ಕರಕ್ಕೆ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕರೆ ನೀಡಿದೆ.

ಇನ್ನು ಆಗಸ್ಟ್ 17, ಶನಿವಾರದಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಲು ಬೀದಿಗಿಳಿಯಲಿದ್ದಾರೆ. ನಗರದ ಆರ್‌ಜಿ ಕಾರ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ಮಮತಾ ಬ್ಯಾನರ್ಜಿ ಪ್ರತಿಭಟನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಅಷ್ಟೇಅಲ್ಲದೆ ಮಮತಾ ಬ್ಯಾನರ್ಜಿ ಮುಂದಿನ ಭಾನುವಾರದೊಳಗೆ ನ್ಯಾಯ ಒದಗಿಸಬೇಕು ಎಂದು ಕೋಲ್ಕತ್ತಾ ಪೊಲೀಸರಿಂದ ತನಿಖೆಯನ್ನು ವಹಿಸಿಕೊಂಡ ಕೇಂದ್ರೀಯ ತನಿಖಾ ದಳಕ್ಕೆ ತಿಳಿಸಿದ್ದಾರೆ.

ಘಟನೆಯ ಕುರಿತಂತೆ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) 12 ಗಂಟೆಗಳ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ, ಆಗಸ್ಟ್ 16 ರಂದು ಮೆಟ್ರೋ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಕೋಲ್ಕತ್ತಾ ಮೆಟ್ರೋ ರೈಲ್ವೆ ತಿಳಿಸಿದೆ. ಈ ನಡುವೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಇನ್ನು ದೇಶದಾದ್ಯಂತ ಆಗಸ್ಟ್ 17 ರಂದು ಬೆಳಿಗ್ಗೆ 6 ರಿಂದ ಆಗಸ್ಟ್ 18ರ ಬೆಳಿಗ್ಗೆ 6 ರವರೆಗೆ ತುರ್ತು ಚಿಕಿತ್ಸೆ ಹೊರತು ಪಡಿಸಿ ಇನ್ಯಾವುದೇ ರೀತಿಯ ಚಿಕಿತ್ಸಾ ಸೌಲಭ್ಯವಿರುವುದಿಲ್ಲ. ಸರ್ಕಾರಿ, ಖಾಸಗಿ ಮತ್ತು ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಎಲ್ಲಾ ಒಪಿಡಿಗಳು ಮತ್ತು ಶಸ್ತ್ರಚಿಕಿತ್ಸೆ ಘಟಕಗಳುಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ಘೋಷಿಸಿದ್ದು, ಎಲ್ಲಾ ಅಗತ್ಯ ಸೇವೆಗಳನ್ನು ನಿರ್ವಹಿಸಲಾಗುವುದು. ಅಪಘಾತದ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುವುದು. ಒಪಿಡಿಗಳು ಕಾರ್ಯನಿರ್ವಹಿಸುವುದಿಲ್ಲ ಮತ್ತು ಕೆಲ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ ಎಂದು ತಿಳಿಸಿದೆ.

ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಖಂಡಿಸಿ ಶುಕ್ರವಾರ ಸಂಜೆ ಪಶ್ಚಿಮ ಬಂಗಾಳದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕ್ಯಾಂಡಲ್‌ ಹಿಡಿದು ಮೌನ ಪ್ರತಿಭಟನೆ ನಡೆಸಲಿದೆ. ರಾಷ್ಟ್ರೀಯ ಮಹಿಳಾ ಮೋರ್ಚಾ ಅಧ್ಯಕ್ಷೆ ವನತಿ ಶ್ರೀನಿವಾಸನ್ ನೇತೃತ್ವದಲ್ಲಿ ಇಂದು ಸಂಜೆ 6 ಗಂಟೆಗೆ ಬಿಜೆಪಿ ಮಹಿಳಾ ಮೋರ್ಚಾದಿಂದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನ ಹೊರಗೆ ಮೆರವಣಿಗೆ ನಡೆಯಲಿದೆ. ರಾಜ್ಯಸಭಾ ಸಂಸದ ದರ್ಶನ್ ಸಿಂಗ್, ಸಂಗೀತಾ ಯಾದವ್, ಗೀತಾ ಶಾಕ್ಯ, ಪಶ್ಚಿಮ ಬಂಗಾಳದ ಉಸ್ತುವಾರಿ ಪೂಜಾ ಕಪಿಲ್ ಮಿಶ್ರಾ ಮತ್ತು ಇಂದು ಬಾಲ ಗೋಸ್ವಾಮಿ ಭಾಗಿಯಾಗಲಿದ್ದಾರೆ.

- Advertisement -

Latest News

error: Content is protected !!