Friday, May 10, 2024
Homeತಾಜಾ ಸುದ್ದಿನಾಳೆಯಿಂದ ಮಹಿಳೆಯರಿಗೆ ಬಸ್ ನಲ್ಲಿ ಫ್ರೀ ಪ್ರಯಾಣಕ್ಕೆ ಅವಕಾಶ; ಉಚಿತ ಪ್ರಯಾಣಕ್ಕೆ ಯಾವ ದಾಖಲೆಯಿರಬೇಕು?

ನಾಳೆಯಿಂದ ಮಹಿಳೆಯರಿಗೆ ಬಸ್ ನಲ್ಲಿ ಫ್ರೀ ಪ್ರಯಾಣಕ್ಕೆ ಅವಕಾಶ; ಉಚಿತ ಪ್ರಯಾಣಕ್ಕೆ ಯಾವ ದಾಖಲೆಯಿರಬೇಕು?

spot_img
- Advertisement -
- Advertisement -

ಬೆಂಗಳೂರು; ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ನಾಳೆ ಚಾಲನೆ ಸಿಗಲಿದೆ.ಯೋಜನೆಯನ್ನು ನಾಳೆ ಮಧ್ಯಾಹ್ನ 01 ಗಂಟೆಯಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗುತ್ತಿದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಸಾಕ್ಷಿಗಾಗಿ ತಮ್ಮ ಮೂಲ ದಾಖಲಾತಿಗಳನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

 ಹಾಗಾದ್ರೆ ಉಚಿತ ಪ್ರಯಾಣಕ್ಕೆ ಯಾವ ದಾಖಲೆಗಳಿರಬೇಕು?

ಆಧಾರ್ ಕಾರ್ಡ

ಮತದಾರರ ಗುರುತಿನ ಚೀಟಿ

ಚಾಲನಾ ಪರವಾನಿಗೆ ಪತ್ರ

ವಾಸಸ್ಥಳ ನಮೂದಿಸಿರುವ ಭಾರತ ಸರ್ಕಾರದ ಇಲಾಖೆಗಳು, ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು (ಪಿ.ಎಸ್.ಯು.ಎಸ್) ವಿತರಿಸಿರುವ ಗುರುತಿನ ಚೀಟಿ ಅಥವಾ ವಾಸಸ್ಥಳ ನಮೂದಿಸಿರುವಂತಹ ಕರ್ನಾಟಕ ಸರ್ಕಾರದ ಇಲಾಖೆಗಳು, ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ

ಕರ್ನಾಟಕ ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರೀಕ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಗುರುತಿನ ಚೀಟಿ. ಈ ಎಲ್ಲಾ ಗುರುತಿನ ಚೀಟಿಗಳಲ್ಲಿ ಯಾವುದಾದರು ಒಂದನ್ನು ತೋರಿಸಿ ‘ಶೂನ್ಯ ಮೊತ್ತದ ಟಿಕೇಟ್” ಪಡೆದು ಮಹಿಳೆಯರು ಜೂನ್ 11ರ ಮಧ್ಯಾಹ್ನ 01 ಗಂಟೆಯಿಂದ ಉಚಿತ ಸಾರಿಗೆ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದು.

- Advertisement -
spot_img

Latest News

error: Content is protected !!