- Advertisement -
![]()
- Advertisement -
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ನೀತಿಯನ್ನು ಹೊರಡಿಸಿದ್ದು, ಇದೀಗ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಎಲ್ಲಾ ವಿದೇಶಿ ಕಾರು ಹಾಗೂ ಇತರೇ ವಾಹನಗಳ ಮೇಲೆ ಶೇ.25 ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ.
ಅಮೆರಿಕ ಸರ್ಕಾರವು ವಿಧಿಸುವ ಈ ಸುಂಕವು ಶಾಶ್ವತವಾಗಿರಲಿದೆ. ಅಮೆರಿಕದಲ್ಲೇ ತಯಾರು ಮಾಡಿದ್ರೆ ಅದಕ್ಕೆ ಯಾವುದೇ ಸುಂಕ ವಿಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಘೋಷಣೆಯನ್ನು ಟ್ರಂಪ್ ಓವಲ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಡಿದ್ದಾರೆ.
ಹೊಸ ಸುಂಕ ನೀತಿಯು ಏಪ್ರಿಲ್ 2ರಿಂದ ಜಾರಿಯಾಗಲಿದ್ದು, ಏಪ್ರಿಲ್ 3ರಿಂದ ಸಂಗ್ರಹ ಪ್ರಾರಂಭವಾಗಲಿದೆ. ಈ ನೀತಿಯು ದೇಶಿಯ ಉತ್ಪಾದನೆಯನ್ನು ಉತ್ತೇಜಿಸಲು ಸಹಕಾರಿಯಾಗಿದೆ.
ಈ ನಿರ್ಧಾರದಿಂದ ಅಮೆರಿಕದ ಗ್ರಾಹಕರು ಹಣದುಬ್ಬರ ಎದುರಿಸಬೇಕಾಗುತ್ತದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ.
- Advertisement -


