ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷ ಜಯಭೇರಿ ಬಾರಿಸಿದೆ.
ಚುನಾವಣೆಯ ಫಲಿತಾಂಶವನ್ನು ನಂ.06 ಬುಧವಾರದಂದು ಘೋಷಿಸುವ ಮೂಲಕ ಟ್ರಂಪ್ 2ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
270ಕ್ಕೂ ಅಧಿಕ ಎಲೆಕ್ಟ್ರೊರಲ್ ಮತ ಪಡೆದು ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷೀಯ ಪಟ್ಟವನ್ನು ಏರಿದ್ದಾರೆ. ಮಲಾ ಹ್ಯಾರಿಸ್ ಅವರು 224 ಸ್ಥಾನ ಪಡೆದು ಪರಾಜಯಗೊಳ್ಳುವ ಮೂಲಕ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆಯಾಗಬೇಕೆಂಬ ಕನಸು ಭಗ್ನಗೊಂಡಿದೆ.
https://x.com/narendramodi/status/1854075308472926675
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಗೆಳೆಯ ಡೊನಾಲ್ಡ್ ಟ್ರಂಪ್ ಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಗೆಳೆಯ ಡೊನಾಲ್ಡ್ ಟ್ರಂಪ್ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವುದಕ್ಕೆ ಹಾರ್ದಿಕ ಅಭಿನಂದನೆಗಳು ತಿಳಿಸುವುದಾಗಿ ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ನಲ್ಲಿ ಶೇರ್ ಮಾಡಿದ್ದಾರೆ.