Thursday, June 4, 2026
Homeಕರಾವಳಿಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಪ್ಲಾಸ್ಮಾ ದಾನ ಮಾಡಿದ ಶಾಸಕ ಡಾ.ವೈ ಭರತ್ ಶೆಟ್ಟಿ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಪ್ಲಾಸ್ಮಾ ದಾನ ಮಾಡಿದ ಶಾಸಕ ಡಾ.ವೈ ಭರತ್ ಶೆಟ್ಟಿ

- Advertisement -
- Advertisement -

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಶಾಸಕ ಭರತ್ ಶೆಟ್ಟಿ ಇಂದು ಪ್ಲಾಸ್ಮಾ ದಾನ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೊರೊನಾ ಪಾಸಿಟಿವ್ ಆಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರು ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಮಾಡುವ ಮೂಲಕ‌ ಎಲ್ಲರಿಗೂ ಮಾದರಿಯಾಗಿದ್ದಾರೆ.

ಕಳೆದ ಜುಲೈ 2ರಂದು ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಶಾಸಕರು ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ಕ್ವಾರಂಟೈನ್ ನಲ್ಲಿದ್ದರು. ಒಂದು ವಾರದ ಹಿಂದೆ ಸಂಪೂರ್ಣ ಗುಣಮುಖರಾದ ಶಾಸಕ ಭರತ್ ಶೆಟ್ಟಿ , ಕೊರೊನಾ ಪಾಸಿಟಿವ್ ಆಗಿರುವ ವ್ಯಕ್ತಿಯೋಬ್ಬರಿಗೆ ಇಂದು ಪ್ಲಾಸ್ಮಾ ದಾನ ಮಾಡಿದ್ದಾರೆ.

ಕೊರೊನಾದಿಂದ ಸಂಪೂರ್ಣ ಗುಣಮುಖರಾದ ಬಳಿಕ ಶಾಸಕರು ಕ್ಷೇತ್ರದ ಕೆಲಸ, ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಇದೀಗ ಪ್ಲಾಸ್ಮಾ ದಾನ ಮಾಡುವ ಮೂಲಕ ಇತರರಿಗೆ ಮಾದರಿ ಜೊತೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

Posted by Bharath Shetty on Thursday, 17 September 2020

- Advertisement -

Latest News

error: Content is protected !!