Wednesday, April 16, 2025
Homeಕರಾವಳಿಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

spot_img
- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಸರಕಾರಿ ಉನ್ನತೀಕರಿಸಿದ ಶಾಲೆ ಬದನಾಜೆಯ ಶಾಲಾ ಸಭಾಂಗಣ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ರೂಪದಲ್ಲಿ ಒಂದು ಲಕ್ಷ ರೂಪಾಯಿ ಮಂಜೂರಾಗಿದ್ದು ‌ಅನುದಾನದ ಚೆಕ್ ಅನ್ನು ಹಸ್ತಾಂತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ದ.ಕ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್,ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ,ನಿವೃತ್ತ ಪ್ರಾದೇಶಿಕ ನಿರ್ದೇಶಕರಾದ ಸೀತಾರಾಮ ಶೆಟ್ಟಿ ಕೆಂಬರ್ಜೆ, ಉಜಿರೆ  ಮೇಲ್ವಿಚಾರಕರಾದ ವನಿತಾ, ಸೇವಾ ಪ್ರತಿನಿಧಿ ಹೇಮಲತಾ ಇವರು ಹಸ್ತಾಂತರಿಸಿದರು.

 ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರುಗಳಾದ ಬಾಬು ನಾಯ್ಕ ಮತ್ತು ಸುರೇಶ್ ನಾಯ್ಕ,  ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ನಿರಂಜನ್, ಸುಜ್ಞಾನ ನಿಧಿ ಯೋಜನೆಯ ಸಂಚಾಲಕ ಸುಂದರ ಬಂಗೇರ ಮತ್ತು ಸಹ ಸಂಚಾಲಕ ಸೋಮಶೇಖರ ಕೆ ಮತ್ತು ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಪಿತಾಂಬರ ಪೂಜಾರಿ ಇವರುಗಳು ಚೆಕ್ ಸ್ವೀಕರಿಸಿದರು. ಬದನಾಜೆ ಶಾಲೆಯಲ್ಲಿ ಮಕ್ಕಳ ಕ್ಷೀರ ಭಾಗ್ಯ, ಅಕ್ಷರ ದಾಸೋಹ, ಶಾಲಾ ಪಾರ್ಥನೆಗೆ, ಸಭೆ ಸಮಾರಂಭಗಳಿಗೆ ಅನುಕೂಲವಾಗುವಂತೆ ಸುಮಾರು 15 ಲಕ್ಷ ವೆಚ್ಚದಲ್ಲಿ ಸಭಾಂಗಣ ರಚನೆ ಕಾರ್ಯ ಪ್ರಗತಿಯಲ್ಲಿದ್ದು, ಶಾಲಾ ಹಿರಿಯ ವಿದ್ಯಾರ್ಥಿಗಳು, ಶಾಲಾಭಿಮಾನಿಗಳು ಕೈ ಜೋಡಿಸುತ್ತಿದ್ದಾರೆ.

- Advertisement -
spot_img

Latest News

error: Content is protected !!