Monday, May 6, 2024
Homeತಾಜಾ ಸುದ್ದಿಎಲ್ಲಾ ಮಸೀದಿಗಳಲ್ಲಿ ಶಿವಲಿಂಗವನ್ನು ಹುಡುಕಿ ವಿವಾದ ಸೃಷ್ಟಿಸಬೇಡಿ : ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ

ಎಲ್ಲಾ ಮಸೀದಿಗಳಲ್ಲಿ ಶಿವಲಿಂಗವನ್ನು ಹುಡುಕಿ ವಿವಾದ ಸೃಷ್ಟಿಸಬೇಡಿ : ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ

spot_img
- Advertisement -
- Advertisement -

ನವದೆಹಲಿ: ಎಲ್ಲಾ ಮಸೀದಿಗಳಲ್ಲಿ ಶಿವಲಿಂಗವನ್ನು ಹುಡುಕಿ ವಿವಾದ ಸೃಷ್ಟಿಸಬೇಡಿ ಎಂದು ಆರ್.ಎಸ್.ಎಸ್. ಮುಖ್ಯಸ್ಥರಾದ ಮೋಹನ್ ಭಾಗವತ್ ಹೇಳಿದ್ದಾರೆ.

ಜ್ಞಾನವಾಪಿ ಮಸೀದಿಯ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಜ್ಞಾನವಾಪಿ ವಿವಾದ ನಂಬಿಕೆ ಸಂಬಂಧಪಟ್ಟ ವಿಚಾರವಾಗಿದೆ. ಈ ಬಗ್ಗೆ ನ್ಯಾಯಾಲಯ ನೀಡುವ ತೀರ್ಪನ್ನು ಎಲ್ಲರೂ ಒಪ್ಪಬೇಕಾಗುತ್ತದೆ ಎಂದು ಹೇಳಿದ್ದಾರೆ.

ಆರ್.ಎಸ್.ಎಸ್. ನ ಮೂರನೇ ಅಧಿಕಾರಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ವಾರಾಣಾಸಿಯಲ್ಲಿ ಜ್ಞಾನವಾಪಿ ಮಸೀದಿಯ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇತಿಹಾಸವನ್ನು ಯಾರೂ ತಿರುಚಲು ಸಾಧ್ಯವಿಲ್ಲ. ಈಗಿನ ಹಿಂದೂಗಳಾಗಲೀ ಅಥವಾ ಮುಸ್ಲಿಂರಾಗಲೀ ಹೊಸದಾಗಿ ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಈ ಹಿಂದೆ ಮುಸ್ಲಿಂರು ಆಕ್ರಮಣಕಾರರಾಗಿ ಭಾರತಕ್ಕೆ ಬಂದ ಸಂದರ್ಭದಲ್ಲಿ ಇವೆಲ್ಲವೂ ಸಂಭವಿಸಿದ್ದವು. ಈ ಆಕ್ರಮಣಕಾರರು ಸ್ವಾತಂತ್ರ್ಯ ಬಯಸಿದ್ದ ಭಾರತೀಯರ ಆತ್ಮಸ್ಥೈರ್ಯವನ್ನು ಕುಂದಿಸುವ ಸಲುವಾಗಿ ದೇವಾಲಯಗಳನ್ನು ಧ್ವಂಸಗೊಳಿಸಿದ್ದರು. ಹೀಗೆ ಧ್ವಂಸಗೊಂಡ ಸಾವಿರಾರು ದೇವಾಲಯಗಳು ನಮ್ಮ ದೇಶದಲ್ಲಿವೆ. ಈ ಬಗ್ಗೆ ಆರ್.ಎಸ್.ಎಸ್. ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಮಸೀದಿಯಲ್ಲೂ ಶಿವಲಿಂಗವನ್ನು ಹುಡುಕುವ ಪ್ರಯತ್ನವನ್ನು ಕೈಬಿಡಬೇಕೆಂದು ಅವರು ಕರೆ ನೀಡಿದ್ದಾರೆ.

- Advertisement -
spot_img

Latest News

error: Content is protected !!