Thursday, October 22, 2026
HomeUncategorizedಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಅಂತಿಮಗೊಳಿಸಬೇಡಿ; ಕೇಂದ್ರ ಸಚಿವರಿಗೆ ಸಿಎಂ...

ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಅಂತಿಮಗೊಳಿಸಬೇಡಿ; ಕೇಂದ್ರ ಸಚಿವರಿಗೆ ಸಿಎಂ ಮನವಿ

- Advertisement -
- Advertisement -

ನವದೆಹಲಿ: ಕಸ್ತೂರಿ ರಂಗನ್‌ ವರದಿ ಕುರಿತಾದ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಏಳನೇ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸಬೇಡಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಸ್ತೂರಿ ರಂಗನ್‌ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸದಂತೆ ಮನವಿ ಮಾಡಿದ್ದಾರೆ.

ಕಸ್ತೂರಿರಂಗನ್ ವರದಿಯ ಆಧಾರದ ಮೇಲೆ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆಯು ಹೊರಡಿಸಿರುವ ಜುಲೈ 27ರ 7ನೇ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸದಂತೆ ಕೋರಿ ಪತ್ರದ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೂ ಮನವಿ ಮಾಡಲಾಗಿದೆ ಎಂದು ಸಿಎಂ ಈ ವೇಳೆ ಕೇಂದ್ರ ಸಚಿವರ ಗಮನಕ್ಕೆ ತಂದಿದ್ದಾರೆ.

ಅಲ್ಲದೇ, ರಾಜ್ಯ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ವರದಿ ಸಲ್ಲಿಕೆಯಾಗಿ, ಒಂದು ವರ್ಷದ ಅವಧಿಯಲ್ಲಿ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಇದನ್ನು ಅಂತಿಮಗೊಳಿಸಬಾರದು ಮತ್ತು ರಾಜ್ಯ ಸರ್ಕಾರದ ಸಮಾಲೋಚನೆಯೊಂದಿಗೆ ಭಾರತ ಸರ್ಕಾರವು ಮುಂದಿನ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಡಿ.ಕೆ. ಶಿವಕುಮಾರ್ ಕೋರಿದ್ದಾರೆ.

- Advertisement -

Latest News

error: Content is protected !!