- Advertisement -
- Advertisement -
ಬೆಂಗಳೂರು, ಎ.5: ಅಲ್ಪಸಂಖ್ಯಾತ ಮುಸ್ಲಿಮರ ಬಗ್ಗೆ ಯಾರಾದರೂ ಕೆಟ್ಟ ರೀತಿಯಲ್ಲಿ ಮಾತನಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಅಲ್ಪಸಂಖ್ಯಾತ ಮುಸ್ಲಿಮ್ ಶಾಸಕರ ಸಭೆ ಕರೆದು ಚರ್ಚಿಸಿದ್ದೇನೆ. ಅವರು ಮೊದಲ ಬಾರಿಗೆ ಮಸೀದಿಗಳಲ್ಲಿ ನಮಾಝ್ ಮಾಡದೇ, ಮನೆಯಲ್ಲಿ ನಮಾಝ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಅವರು ಸಹಕಾರ ಕೊಡುತ್ತಿದ್ದಾರೆ ಎಂದು ತಿಳಿಸಿದರು.
ಯಾರೊಬ್ಬರೂ ಒಂದು ಶಬ್ದ ಅಲ್ಪಸಂಖ್ಯಾತ ಮುಸ್ಲಿಮರ ಬಗ್ಗೆ ಮಾತನಾಡಕೂಡದು. ನಾನು ಎಚ್ಚರಿಕೆ ಕೊಡುತ್ತಿದ್ದೇನೆ. ಯಾವುದಾದರೂ ಸಣ್ಣ ಘಟನೆ ನಡೆದರೆ ಅದಕ್ಕೆ ಇಡೀ ಮುಸ್ಲಿಂ ಸಮುದಾಯವೇ ಜವಾಬ್ದಾರರು ಎಂಬ ರೀತಿಯಲ್ಲಿ ಮಾತನಾಡಿದರೆ ಅಂತವರ ಮೇಲೆ ಕ್ರಮ ಕೈಗೊಳ್ಳುತ್ತೇನೆ. ಈ ವಿಷಯಲ್ಲಿ ನಾನು ಹಿಂದೆ ಮುಂದೆ ನೋಡುವುದಿಲ್ಲ ಎಂದು ಬಿಎಸ್‌ವೈ ಎಚ್ಚರಿಕೆ ನೀಡಿದ್ದಾರೆ.
- Advertisement -