Thursday, June 4, 2026
Homeಕರಾವಳಿಬಿಜೆಪಿ ಯುವ ಮೋರ್ಚಾದ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆ ಹಬ್ಬ!

ಬಿಜೆಪಿ ಯುವ ಮೋರ್ಚಾದ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆ ಹಬ್ಬ!

- Advertisement -
- Advertisement -

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾದ ವತಿಯಿಂದ ಸಂಸ್ಕೃತಿಯನ್ನು ಮತ್ತೆ ಹಿಂದೂ ಸಮಾಜಕ್ಕೆ ನೆನಪಿಸುವ ಮಹತ್ವಪೂರ್ಣವಾದ ಕಾರ್ಯದ ಪ್ರಯುಕ್ತ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ ನ.3 ರಂದು ಜರುಗಿತು

ಕಾರ್ಯಕ್ರಮದ ಆರಂಭದಲ್ಲಿ ಚೆಂಡೆ, ತಾಳ ಮದ್ದಳೆವಾದನಗಳೊಂದಿಗೆ ಬೃಹತ್ ಮೆರವಣಿಗೆಯ ಮೂಲಕ ಗಣ್ಯರುಗಳನ್ನು ವೇದಿಕೆಗೆ ಕರೆತರಲಾಯಿತು. ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ ಪ್ರತಾಪ ಸಿಂಹ ನಾಯಕ್ ರವರು ದೀಪಾವಳಿ ದೋಸೆ ಹುಯ್ಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಯಶವಂತ ಗೌಡ ಬೆಳಾಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಉಪಾಧ್ಯಕ್ಷ ಜಯಾನಂದ ಗೌಡ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ, ಕುಡ್ವ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಉಪಾಧ್ಯಕ್ಷ ಸೀತಾರಾಮ ಬೆಳಾಲು, ಮಹಿಳಾ ಬಿಜೆಪಿ ಯುಮೋರ್ಚಾ ಅಧ್ಯಕ್ಷೆ ವಿಜಯ ಆರಂಬೋಡಿ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಯಶವಂತ ಗೌಡ, ತಾಲೂಕು ಯುವ ಮೋರ್ಚಾ ಕಾರ್ಯದರ್ಶಿ ಉಮೇಶ್ ಕುಲಾಲ್, ತಾಲೂಕು ಯುವ ಮೋರ್ಚಾ ವಿನೀತ್ ಕೋಟ್ಯಾನ್, ಪ.ಪಂ.ಯುವ ಮೋರ್ಚಾ ಅಧ್ಯಕ್ಷ ಚೆನ್ನಕೇಶವ ಹಾಗೂ ಪಕ್ಷದ ಎಲ್ಲಾ ಪದಾಧಿಕಾರಿಗಳು, ಪ.ಪಂ ಸದಸ್ಯರು, ವಿವಿಧ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!