Thursday, June 25, 2026
Homeಕರಾವಳಿಬೆಳ್ತಂಗಡಿಯಲ್ಲಿ ದೀಪಾವಳಿ ಪ್ರಯುಕ್ತ ದೋಸೆ ಹಬ್ಬ: ದೋಸೆ ಹೊಯ್ದು ಹಬ್ಬದಲ್ಲಿ ಪಾಲ್ಗೊಂಡ ಸಚಿವ ಸುನೀಲ್ ಕುಮಾರ್...

ಬೆಳ್ತಂಗಡಿಯಲ್ಲಿ ದೀಪಾವಳಿ ಪ್ರಯುಕ್ತ ದೋಸೆ ಹಬ್ಬ: ದೋಸೆ ಹೊಯ್ದು ಹಬ್ಬದಲ್ಲಿ ಪಾಲ್ಗೊಂಡ ಸಚಿವ ಸುನೀಲ್ ಕುಮಾರ್ ಮತ್ತು ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ ದೋಸೆ ಹಬ್ಬ ನಡೆಯಿತು.ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ದೋಸೆ ಹಬ್ಬವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಚಿವ ಸುನೀಲ್ ಕುಮಾರ್ ಮತ್ತು ಶಾಸಕ ಹರೀಶ್ ಪೂಂಜ ದೋಸೆ ಹೊಯ್ಯುವುದರ ಮೂಲಕ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ತಾಲೂಕಿನ ಉಸ್ತುವಾರಿ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್, ನಗರ ಸಭೆ ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಭಾಗವಹಿಸಿದ್ದರು.

ಬಿಜೆಪಿ ಬೆಳ್ತಂಗಡಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಯಶವಂತ ಗೌಡ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

- Advertisement -

Latest News

error: Content is protected !!