Sunday, June 28, 2026
Homeತಾಜಾ ಸುದ್ದಿಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟೀಲ್‌ಗೆ ಸಿಗೋದು ಡೌಟ್:‌ ಹಾಗಿದ್ರೆ ರೇಸ್‌ನಲ್ಲಿ ಯಾರೆಲ್ಲಾ ಇದ್ದಾರೆ?

ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟೀಲ್‌ಗೆ ಸಿಗೋದು ಡೌಟ್:‌ ಹಾಗಿದ್ರೆ ರೇಸ್‌ನಲ್ಲಿ ಯಾರೆಲ್ಲಾ ಇದ್ದಾರೆ?

- Advertisement -
- Advertisement -

ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರವಧಿ ಇದೇ ತಿಂಗಳು ಮುಕ್ತಾಯಗೊಂಡಿದೆ. ರಾಜ್ಯಾಧ್ಯಕ್ಷರ ಅವಧಿ  ಮುಗಿದ್ರೂ ಮುಂದಿನ ರಾಜ್ಯಾಧ್ಯಕ್ಷ ಯಾರು ಎಂಬ ಬಗ್ಗೆ ಬಿಜೆಪಿ ಯಾವುದೇ ಅಧಿಕೃತ ಪ್ರಕಟಣೆಯನ್ನು ಹೊರಡಿಸಿಲ್ಲ.

ಒಂದು ವೇಳೆ ನಳಿನ್ ಕುಮಾರ್ ಕಟೀಲ್ ಬದಲಾವಣೆಯಾದ್ರೆ ಆ ಸ್ಥಾನಕ್ಕೆ ಶಾಸಕ ಸಿ.ಟಿ ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಸುನಿಲ್ ​ಕುಮಾರ್, ಸಿ.ಎನ್.​ ಅಶ್ವತ್ಥ ನಾರಾಯಣ ಮತ್ತು ಅರವಿಂದ ಲಿಂಬಾವಳಿ ಸ್ಪರ್ಧೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಮೂಲಗಳ ಪ್ರಕಾರ ನಳಿನ್ ಕುಮಾರ್ ಕಟೀಲ್ ಅವರ ಬದಲಾವಣೆ ಬಹುತೇಕ ಫಿಕ್ಸ್ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯಾಧ್ಯಕ್ಷರ ಬದಲಾವಣೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ತಮ್ಮ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಶೀಘ್ರದಲ್ಲಿಯೇ ಈ ಸಂಬಂಧ ಬಿಜೆಪಿ ಹೈಕಮಾಂಡ್​ನಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಗಳಿವೆ.

- Advertisement -

Latest News

error: Content is protected !!