- Advertisement -
![]()
- Advertisement -
ಬೆಂಗಳೂರು: ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಿನ್ನೆಲೆಯಲ್ಲಿ ಐವರು ಸಾಧಕರಿಗೆ ರಾಜ್ಯ ಸರ್ಕಾರದಿಂದ ಅಂಬೇಡ್ಕರ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಐದು ವಿಭಾಗಗಳಿಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಬೆಂಗಳೂರಿನಿಂದ ಮಂಗ್ಳೂರು ವಿಜಯ ಮತ್ತು ಸಿ.ಎಂ. ಮುನಿಯಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಮೈಸೂರಿನ ಹೆಚ್.ಎನ್. ಅಣ್ಣಯ್ಯ, ಕಲ್ಬುರ್ಗಿಯ ಹನುಮಂತರಾವ್ ದೊಡ್ಡಮನಿ ಮತ್ತು ಬೆಳಗಾವಿಯ ಶೋಭ ಗಸ್ತಿ ಅವರಿಗೆ ಪ್ರಶಸ್ತಿ ಘೋಷಿಸಲಾಗಿದೆ.
ಹೋರಾಟ, ಪತ್ರಿಕೋದ್ಯಮ, ಸಾಹಿತ್ಯ, ಸಂಘಟನೆ ಮತ್ತು ದೇವದಾಸಿ ವಿಮುಕ್ತಿ ಕ್ಷೇತ್ರಗಳಲ್ಲಿನ ಸಾಧನೆಗಾಗಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಏಪ್ರಿಲ್ 14 ರಂದು ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
- Advertisement -


