Sunday, May 19, 2024
Homeಕರಾವಳಿಎಂ.ಎಸ್. ಓ.ಬಿ.ಜಿ. ಪದವಿ: ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿಯ ಡಾl ಅಂಕಿತಾ ಭಟ್

ಎಂ.ಎಸ್. ಓ.ಬಿ.ಜಿ. ಪದವಿ: ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿಯ ಡಾl ಅಂಕಿತಾ ಭಟ್

spot_img
- Advertisement -
- Advertisement -

ಬೆಳ್ತಂಗಡಿ: ಬೆಂಗಳೂರಿನ ಪ್ರತಿಷ್ಠಿತ ಗವರ್ನಮೆಂಟ್ ಮೆಡಿಕಲ್ ಕಾಲೇಜು ಬಿ.ಎಂ.ಸಿ.ಆರ್.ಐ. ಯಲ್ಲಿ ಉಜಿರೆಯ ಬೆನಕ ಹೆಲ್ತ್ ಸೆಂಟರಿನ ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತೀ ಜಿ. ಕೆ.ಯವರ ಪುತ್ರಿ ಡಾ| ಅಂಕಿತಾ ಜಿ. ಭಟ್ ಅವರು ಎಂ.ಎಸ್. ಓ.ಬಿ.ಜಿ.(ಪ್ರಸೂತಿ ಮತ್ತು ಸ್ತ್ರೀರೋಗ) ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪದವಿ ಗಳಿಸಿದ್ದಾರೆ,

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿದ ಅಂಕಿತಾ ಜಿ. ಭಟ್ ಅವರು, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಶಿಕ್ಷಣ ಹಾಗೂ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆಡಿದ್ದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ. ಶಿಕ್ಷಣ ಪಡೆದು, ಸಿ.ಇ.ಟಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 47ನೇ ಸ್ಥಾನ ಗಳಿಸಿ ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ವ್ಯಾಸಂಗ ಮುಗಿಸಿದರು. ಪಿ.ಜಿ. ನೀಟ್ ಪರೀಕ್ಷೆಯಲ್ಲಿ ದೇಶಕ್ಕೆ 1400ನೇ ಸ್ಥಾನ ಪಡೆದು ಬೆಂಗಳೂರಿನ ಪ್ರತಿಷ್ಠಿತ ಗವರ್ನಮೆಂಟ್ ಮೆಡಿಕಲ್ ಕಾಲೇಜು-ಬಿ.ಎಂ.ಸಿ.ಆರ್.ಐ.ಯಲ್ಲಿ ಎಂ.ಎಸ್., ಓ.ಬಿ.ಜಿ ವ್ಯಾಸಂಗ ಮುಗಿಸಿದ್ದಾರೆ.

ಪ್ರಸ್ತುತ ಉಜಿರೆಯ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು, ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಉತ್ತಮ ಗಾಯಕಿಯಾಗಿಯೂ ಗುರುತಿಸಲ್ಪಟ್ಟಿದ್ದಾರೆ.

- Advertisement -
spot_img

Latest News

error: Content is protected !!