Thursday, June 4, 2026
Homeಕರಾವಳಿನಾಳೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ ಸೋಮಶೇಖರ್ ಕಾಸರಗೋಡಿಗೆ

ನಾಳೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ ಸೋಮಶೇಖರ್ ಕಾಸರಗೋಡಿಗೆ

- Advertisement -
- Advertisement -

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ ಸೋಮಶೇಖರ ಮತ್ತು ಕಾರ್ಯದರ್ಶಿ ಶ್ರೀ ಪ್ರಕಾಶ್ ಮತ್ತೀಹಳ್ಳಿ ಯವರು ನಾಳೆ ಕಾಸರಗೋಡಿಗೆ ಆಗಮಿಸಲಿದ್ದಾರೆ .

ನಾಳೆ ಬೆಳಗ್ಗೆ ಅವರು ಕಾಸರಗೋಡು ಜಿಲ್ಲಾಧಿಕಾರಿಯವರನ್ನು ಭೇಟಿಮಾಡಿ ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳ ಬಗ್ಗೆ ಚರ್ಚಿಸುವರು .ಆ ಬಳಿಕ ಮಧ್ಯಾಹ್ನ 12 ಗಂಟೆಗೆ ಎಡನೀರು ಮಠದ ಸಭಾಂಗಣದಲ್ಲಿ ನಡೆಯುವ ಸಮಾಲೋಚನೆ , ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆಗೆ ಎಡನೀರಿನಲ್ಲಿ ನಡೆಯುವ ಈ ಸಂವಾದ ಕಾರ್ಯಕ್ರಮದಲ್ಲಿ ಕಾಸರಗೋಡಿನ ಕನ್ನಡಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳು , ವಿದ್ಯಾರ್ಥಿಗಳು , ಯುವಮನಸ್ಸುಗಳು ಭಾಗವಹಿಸಬೇಕೆಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ .

- Advertisement -

Latest News

error: Content is protected !!