Saturday, May 18, 2024
Homeತಾಜಾ ಸುದ್ದಿ86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ.. ಸಮ್ಮೇಳನ ಯಾವಾಗ..? ಎಲ್ಲಿ..?

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ.. ಸಮ್ಮೇಳನ ಯಾವಾಗ..? ಎಲ್ಲಿ..?

spot_img
- Advertisement -
- Advertisement -

ಬೆಂಗಳೂರು: ಹಾವೇರಿಯಲ್ಲಿ ಫೆಬ್ರವರಿ 26ರಿಂದ 28ರವರೆಗೆ ನಡೆಯುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರು ತಿಳಿಸಿದ್ದಾರೆ.

‘ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಗೊ.ರು.ಚನ್ನಬಸಪ್ಪ, ವೀಣಾ ಶಾಂತೇಶ್ವರ, ಎಸ್.ಆರ್. ಗುಂಜಾಳ್, ಕೆ.ಎಸ್. ಭಗವಾನ್ ಸೇರಿದಂತೆ ವಿವಿಧ ಸಾಹಿತಿಗಳ ಹೆಸರು ಚರ್ಚೆಗೆ ಬಂದಿದ್ದವು. ಅಂತಿಮವಾಗಿ ದೊಡ್ಡರಂಗೇಗೌಡ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಮನು ಬಳಿಗಾರ್ ತಿಳಿಸಿದರು.

ಪ್ರತಿಭೆ ಮತ್ತು ಅರ್ಹತೆ ಇದ್ದವರನ್ನು ಆಯ್ಕೆ ಮಾಡಲಾಗಿದೆ. ಸುಮಾರು 25ಎಕರೆ ಪ್ರದೇಶದಲ್ಲಿ ಗುದ್ದಲ್ಯಪ್ಪ ಹಳ್ಳಿಕೇರಿ ಕಾಲೇಜಿನ ಪಕ್ಕದಲ್ಲಿರುವ ವಿಶಾಲ ಮೈದಾನದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದಕ್ಕೆ ಕೋವಿಡ್ ನಿಯಮಗಳನ್ನು ಸಡಿಲಿಸಿ ಅನುಮತಿ ನೀಡುವಂತೆ ಸರ್ಕಾರಕ್ಕೆ ಕೋರಲಾಗಿದೆ. ಮೊದಲ ದಿನವೇ ಒಂದು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದೆ ಎಂದಿದ್ದಾರೆ.

ಈಗಾಗಲೇ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ಗೋಷ್ಠಿ ಸ್ವರೂಪ, ರೂಪರೇಷೆ ಜತೆಗೆ ವಿಷಯದ ಆಯ್ಕೆಗೆ ಸಂಬಂಧಿಸಿದಂತೆ ಆರು ಮಂದಿ ಸದಸ್ಯರ ಸಮಿತಿಯನ್ನು ರಚನೆ ಮಾಡಲಾಗಿದೆ. ಡಾ.ಮನು ಬಳಿಗಾರ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದ್ದು, ಡಾ. ಪ್ರಧಾನ ಗುರುದತ್ತ, ಡಾ.ಬಿವಿ ವಸಂತಕುಮಾರ್, ಡಾ.ಕೆ.ವೈ ನಾರಾಯಣಸ್ವಾಮಿ, ಡಾ.ಸರಜೂ ಕಾಟ್ಕರ್, ಸತೀಶ್ ಕುಲಕರ್ಣಿ ಮತ್ತು ಡಾ. ಜಯಶ್ರೀ ದಂಡೆ ಅವರು ಸಮಿತಿಯ ಸದಸ್ಯರಾಗಿದ್ದಾರೆ.

- Advertisement -
spot_img

Latest News

error: Content is protected !!