Sunday, October 18, 2026
Homeತಾಜಾ ಸುದ್ದಿಕೇಂದ್ರ ಆರೋಗ್ಯ ಖಾತೆ ಸಚಿವ ಡಾ. ಹರ್ಷ್ ವರ್ಧನ್ : ವಿಶ್ವ ಆರೋಗ್ಯ ಸಂಸ್ಥೆಯ...

ಕೇಂದ್ರ ಆರೋಗ್ಯ ಖಾತೆ ಸಚಿವ ಡಾ. ಹರ್ಷ್ ವರ್ಧನ್ : ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ನೇಮಕ

- Advertisement -
- Advertisement -

ನವದೆಹಲಿ: ಇಡೀ ವಿಶ್ವವೇ ಮಾರಕ ಕೋವಿಡ್-19 ಸಮಸ್ಯೆ ಎದುರಿಸುತ್ತಿರುವ ಸಂಧರ್ಭದಲ್ಲಿ , ಕೇಂದ್ರ ಆರೋಗ್ಯ ಖಾತೆ ಸಚಿವ ಡಾ. ಹರ್ಷ್ ವರ್ಧನ್ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಇದೇ 22ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ .


34 ಮಂದಿ ಸದಸ್ಯರನ್ನು ಹೊಂದಿರುವ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಈಗಿನ ಅಧ್ಯಕ್ಷರು ಜಪಾನ್ ನ ಡಾ ಹಿರೊಕಿ ನಕಟನಿಯಾಗಿದ್ದಾರೆ.ಭಾರತದ ಪ್ರತಿನಿಧಿಯನ್ನು ಕಾರ್ಯಕಾರಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಪ್ರಸ್ತಾವನೆಗೆ 194 ದೇಶಗಳನ್ನೊಳಗೊಂಡ ವಿಶ್ವ ಆರೋಗ್ಯ ಸಭೆಯಲ್ಲಿ ನಿನ್ನೆ ಸಹಿ ಮಾಡಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ .
ಮೇ 22 ರಂದು ನಡೆಯಲಿರುವ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿಯ ಸಭೆಯಲ್ಲಿ ಆರೋಗ್ಯ ಖಾತೆ ಸಚಿವ ಡಾ. ಹರ್ಷ್ ವರ್ಧನ್ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚುನಾವಣೆಯು ಕಾರ್ಯವಿಧಾನದ ಔಪಾಚಾರಿಕತೆಯಿಂದ ಕೂಡಿರುತ್ತದೆ ಎಂದು ತಿಳಿದು ಬಂದಿದೆ.
“ಇದು ಪೂರ್ಣ ಸಮಯದ ಹುದ್ದೆ ಅಲ್ಲ. ಆದರೆ ಕಾರ್ಯನಿರ್ವಾಹಕ ಮಂಡಳಿಯ ದ್ವಿ-ವಾರ್ಷಿಕ ಸಭೆಗಳ ಅಧ್ಯಕ್ಷತೆಯನ್ನು ವಹಿಸಲು ಡಾ. ಹರ್ಷ್ ವರ್ಧನ್ ಅವರ ಅಗತ್ಯವಿದೆ” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

Latest News

error: Content is protected !!