Tuesday, June 6, 2023
Homeಕರಾವಳಿಸುಳ್ಯ ತಾಲೂಕು ಆಸ್ಪತ್ರೆಯ ಖ್ಯಾತ ತಜ್ಞ ವೈದ್ಯರಾದ ಡಾ.ಹಿಮಕರ ಕೆ.ಎಸ್ ಸ್ವಯಂ ನಿವೃತ್ತಿ

ಸುಳ್ಯ ತಾಲೂಕು ಆಸ್ಪತ್ರೆಯ ಖ್ಯಾತ ತಜ್ಞ ವೈದ್ಯರಾದ ಡಾ.ಹಿಮಕರ ಕೆ.ಎಸ್ ಸ್ವಯಂ ನಿವೃತ್ತಿ

- Advertisement -
- Advertisement -

ಸುಳ್ಯ ತಾಲೂಕು ಆಸ್ಪತ್ರೆಯ ಖ್ಯಾತ ತಜ್ಞ ವೈದ್ಯರಾದ ಡಾ.ಹಿಮಕರ ಕೆ.ಎಸ್ ಸ್ವಯಂ ನಿವೃತ್ತಿ ಪಡೆದಿದ್ದಾರೆ. 30 ವರ್ಷಗಳ ಸರಕಾರಿ ಸೇವೆಯಿಂದ ಮಾ.31ರಂದು (ಇಂದು) ಸ್ವಯಂ ನಿವೃತ್ತಿ ಪಡೆದಿದ್ದಾರೆ.

ಇವರ 6 ವರ್ಷಗಳ ಸೇವಾ ಅವಧಿ ಉಳಿದಿರುವಂತೆಯೇ ಸ್ವಯಂ ನಿವೃತ್ತಿ‌ ಪಡೆದಿದ್ದಾರೆ. 1993ರಲ್ಲಿ ವೈದ್ಯರಾಗಿ ಸರಕಾರಿ ಸೇವೆಗೆ ಸೇರಿದ್ದ ಡಾ.ಹಿಮಕರ ಅವರು ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ ಬಳಿಕ ಕೆಎಂಸಿಯಲ್ಲಿ ವೈದ್ಯಕೀಯ ಪಿಜಿ ಪಡೆದರು. ಬಳಿಕ ಮಡಿಕೇರಿ ಜಿಲ್ಲಾ ಆಸ್ಪತ್ರಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದರು. ಆ ನಂತರ ಸುಳ್ಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ಎರಡು ವರ್ಷಗಳ ಹಿಂದೆ ಅವರು ಸ್ವಯಂ ನಿವೃತ್ತಿ ಬಯಸಿ ಅರ್ಜಿ‌ ಸಲ್ಲಿಸಿದ್ದರು. ಇದೀಗ ಸರಕಾರ ಅವರಿಗೆ ಸ್ವಯಂ ನಿವೃತ್ತಿ ನೀಡಿದೆ. ಖ್ಯಾತ ಹಾಗು ನುರಿತ ವೈದ್ಯರಾಗಿ ಗುರುತಿಸಿಕೊಂಡಿದ್ದ ಹಿಮಕರ್ ಅವರು ಸರಕಾರಿ ಆಸ್ಪತ್ರೆಯಲ್ಲಿ ಅತೀ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು.

- Advertisement -

Latest News

error: Content is protected !!