Monday, June 8, 2026
Homeಕರಾವಳಿಪುತ್ತೂರು: ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಡಾ.ಎಂ.ಎನ್.ರಾಜೇಂದ್ರಕುಮಾರ್ ..!

ಪುತ್ತೂರು: ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಡಾ.ಎಂ.ಎನ್.ರಾಜೇಂದ್ರಕುಮಾರ್ ..!

- Advertisement -
- Advertisement -

ಪುತ್ತೂರು: ದ.ಕ., ಉಡುಪಿ ಮತಕ್ಷೇತ್ರದಿಂದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸುವ ನಿರ್ಧಾರ ಮಾಡಿ ಉಭಯ ಜಿಲ್ಲೆಗಳ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು ಈಗ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.


ಒತ್ತಾಯ ಮಾಡಿದ ಕಾರಣವಾಗಿ ಉಭಯ ಜಿಲ್ಲೆಗಳ ಸಹಕಾರಿ ಚುನಾವಣೆಗೆ ಸ್ಪರ್ಧಿಸುವಂತೆ ಡಾಕ್ಟರ್ ರಾಜೇಂದ್ರ ಕುಮಾರ್ ಸ್ಪರ್ಧೆಯ ನಿರ್ಧಾರ ಮಾಡಿದ್ದರು ಮತ್ತು ನವೆಂಬರ್ 16ರಂದು ಅವರ ಚುನಾವಣಾ ಕಚೇರಿ ಮಂಗಳೂರಿನಲ್ಲಿ ಅದ್ದೂರಿಯಾಗಿ ಉದ್ಘಾಟನೆಗೊಂಡಿತ್ತು. ಆದರೆ ಇದೀಗ ಅವರು ಚುಣಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ತಾನು ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಉಳಿಯುವ ಇಚ್ಛೆಯಿಂದ ನಿರ್ಧಾರಕ್ಕೆ ಬಂದಿರುವುದಾಗಿ ಡಾ.ಎಂ.ಎನ್.ರಾಜೇಂದ್ರಕುಮಾರ್ ಹೇಳಿರುವುದಾಗಿ ವರದಿಯಾಗಿದೆ.
ಇವರ ಈ ನಿರ್ಧಾರಕ್ಕೆ ಕಾರಣಗಳೇನು ಎಂಬುದು ತಿಳಿದುಬಂದಿಲ್ಲ.

- Advertisement -

Latest News

error: Content is protected !!