- Advertisement -
![]()
- Advertisement -
ಚಾಮರಾಜನಗರ: ವರನಟ ಡಾ.ರಾಜಕುಮಾರ್ ಸಹೋದರಿ ನಾಗಮ್ಮ(94 ವರ್ಷ) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಬೆಳಗ್ಗೆ 11 ಗಂಟೆಗೆ ಚಾಮರಾಜನಗರ ಜಿಲ್ಲೆಯ ತಾಳವಾಡಿ ತಾಲೂಕಿನ ಗಾಜನೂರಿನಲ್ಲಿ ನಿಧನರಾಗಿದ್ದಾರೆ.
ಕೆಲವು ವರ್ಷಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡಾ. ರಾಜ್‌ಕುಮಾರ್ ಅವರು ಪ್ರೀತಿಯಿಂದ ಕಟ್ಟಿಸಿದ ಮನೆಯಲ್ಲಿ ವಾಸವಿದ್ದರು.
ಮೃತರಿಗೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ. ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
- Advertisement -


