Monday, June 8, 2026
Homeತಾಜಾ ಸುದ್ದಿನ್ಯಾ.ಸಂಜೀವ್ ಖನ್ನಾ ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕಾರ

ನ್ಯಾ.ಸಂಜೀವ್ ಖನ್ನಾ ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ನವದೆಹಲಿ: ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಅವರು 2024 ನಂ.11 ಸೋಮವಾರದಂದು ಪ್ರಮಾಣವಚನ ಸ್ವೀಕರಿಸಿದರು. ಈ ಕಾರ್ಯಕ್ರಮವು ರಾಷ್ಟ್ರಪತಿ ಭವನದಲ್ಲಿ ನಡೆದಿದ್ದು, ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

https://x.com/ANI/status/1855832849359986735?

ನ್ಯಾ.ಸಂಜೀವ್ ಖನ್ನಾ ಅವರು 2025ರ ಮೇ 13ರವರೆಗೆ 6 ತಿಂಗಳ ಕಾಲ ಸೇವೆ ಸಲ್ಲಿಸಲಿದ್ದಾರೆ. ಇವರಿಗೆ ಅಕ್ಟೋಬರ್ 24ರಂದು ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ನೇಮಿಸಲು ಅನುಮೋದನೆ ನೀಡಿತು.  

- Advertisement -

Latest News

error: Content is protected !!