Wednesday, June 3, 2026
Homeಕರಾವಳಿಕೆ.ಆರ್. ಪೇಟೆಯಲ್ಲಿ ಮಹಾ ಕುಂಭ ಮೇಳಕ್ಕೆ ಡಾ. ವೀರೇಂದ್ರ ಹೆಗ್ಗಡೆ ಚಾಲನೆ

ಕೆ.ಆರ್. ಪೇಟೆಯಲ್ಲಿ ಮಹಾ ಕುಂಭ ಮೇಳಕ್ಕೆ ಡಾ. ವೀರೇಂದ್ರ ಹೆಗ್ಗಡೆ ಚಾಲನೆ

- Advertisement -
- Advertisement -

ಮಂಡ್ಯ: ಕೆ.ಆರ್. ಪೇಟೆ ತಾಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಮಲೈ ಮಹದೇಶ್ವರ ಮಹಾ ಕುಂಭಮೇಳ ಇಂದು ಉದ್ಘಾಟನೆಗೊಂಡಿದೆ. ಕುಂಭಮೇಳ ಮಹೋತ್ಸವವನ್ನು ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು‌.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ಕಾಗಿನೆಲೆ ಕನಕಗುರು ಪೀಠದ ಶಿವಾನಂದಪುರಿ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಕುಂಭ ಮೇಳ ಉದ್ಘಾಟನೆಗೊಂಡಿದೆ

ಸಮಾರಂಭದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕ್ರೀಡಾ ಸಚಿವ ನಾರಾಯಣ ಗೌಡ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಮತ್ತು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತರಿದ್ದರು. ಇಂದಿನಿಂದ ಮೂರು ದಿನಗಳ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಕುಂಭ ಮೇಳ ಜರುಗಲಿದೆ.

- Advertisement -

Latest News

error: Content is protected !!