Friday, June 5, 2026
Homeಕರಾವಳಿಬೆಳ್ತಂಗಡಿ: ಡಾ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಿದ ದ.ಕ. ಜಿಲ್ಲಾ ಬಿಜೆಪಿ ಶಾಸಕರು

ಬೆಳ್ತಂಗಡಿ: ಡಾ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಿದ ದ.ಕ. ಜಿಲ್ಲಾ ಬಿಜೆಪಿ ಶಾಸಕರು

- Advertisement -
- Advertisement -

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರಾಗಿ ಭಾರತ ಸರಕಾರದಿಂದ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಜುಲೈ 11ರಂದು ಬೀಡಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.


ಮಂಗಳೂರು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉತ್ತರ ಕ್ಷೇತ್ರದ ಶಾಸಕ ಡಾ| ಭರತ್ ಶೆಟ್ಟಿ, ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್, ಕಾರ್ಯದರ್ಶಿಗಳಾದ ಶ್ರೀನಿವಾಸ ರಾವ್ ಹಾಗೂ ಗಣೇಶ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಸುಧೀರ್ ಕಣ್ಣೂರು, ಕಾಶಿಪಟ್ಟ ಗ್ರಾಮ ಪಂಚಾಯತ್ ಸದಸ್ಯ ಮರೋಡಿ ಬುಣ್ಣಾನ್, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಲಾಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅಜಿತ್ ಆರಿಗ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!