Wednesday, July 1, 2026
Homeತಾಜಾ ಸುದ್ದಿಸಚಿವರಾದ ನಂತರ ಮೊದಲ ಬಾರಿಗೆ ಚಾಮುಂಡೇಶ್ವರಿ ದರ್ಶನ ಪಡೆದ ಡಾ. ಯತೀಂದ್ರ ಸಿದ್ದರಾಮಯ್ಯ

ಸಚಿವರಾದ ನಂತರ ಮೊದಲ ಬಾರಿಗೆ ಚಾಮುಂಡೇಶ್ವರಿ ದರ್ಶನ ಪಡೆದ ಡಾ. ಯತೀಂದ್ರ ಸಿದ್ದರಾಮಯ್ಯ

- Advertisement -
- Advertisement -

ಮೈಸೂರು: ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಚಿವರಾದ ಬಳಿಕ ಮೊದಲ ಬಾರಿಗೆ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ  ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಸಮೃದ್ಧ ಬೆಳೆ ಬೆಳೆಯುವಂತಾಗಲಿ, ರೈತರು ಸೇರಿದಂತೆ ಸಮಸ್ತ ಜನತೆಗೆ ಸುಭಿಕ್ಷೆ ಹಾಗೂ ನೆಮ್ಮದಿ ದೊರೆಯಲಿ ಎಂದು ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಭೇಟಿಯ ವೇಳೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರಾಕೇಶ್ ಪಾಪಣ್ಣ ಅವರು ಸಚಿವರೊಂದಿಗೆ ಉಪಸ್ಥಿತರಿದ್ದರು.

- Advertisement -

Latest News

error: Content is protected !!