Wednesday, May 15, 2024
Homeತಾಜಾ ಸುದ್ದಿದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು

ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು

spot_img
- Advertisement -
- Advertisement -

ನವದೆಹಲಿ:  ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.‌

ಈ ವೇಳೆ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಪ್ರಮಾಣ ವಚನ‌ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಭಾರತವು 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರಪತಿಯಾಗಿ ಆಯ್ಕೆ ಆಗಿರುವುದು ವಿಶೇಷ ಗೌರವ ಎಂದರು.

ಎಲ್ಲಾ ಭಾರತೀಯರ ನಿರೀಕ್ಷೆಗಳು, ಆಕಾಂಕ್ಷೆಗಳು ಮತ್ತು ಹಕ್ಕುಗಳ ಸಂಕೇತವಾಗಿದೆ. ಸಂಸತ್ತಿನಲ್ಲಿ ನಿಂತು ನಾನು ನಿಮ್ಮೆಲ್ಲರಿಗೂ ವಿನಮ್ರವಾಗಿ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಈ ಹೊಸ ಜವಾಬ್ದಾರಿಯನ್ನು ನಿರ್ವಹಿಸಲು ನಿಮ್ಮ ನಂಬಿಕೆ ಮತ್ತು ಬೆಂಬಲ ನನಗೆ ಪ್ರಮುಖ ಶಕ್ತಿಯಾಗಿದೆ,” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು.

“ನಾನು ಸ್ವಾತಂತ್ರ್ಯ ಭಾರತದಲ್ಲಿ ಜನಿಸಿದ ದೇಶದ ಮೊದಲ ರಾಷ್ಟ್ರಪತಿ ಆಗಿದ್ದೇನೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು, ಸ್ವತಂತ್ರ ಭಾರತದ ನಾಗರಿಕರೊಂದಿಗೆ ಹೊಂದಿದ್ದ ನಿರೀಕ್ಷೆಗಳನ್ನು ಪೂರೈಸಲು ನಾವು ಪ್ರಯತ್ನಿಸಬೇಕಿದೆ. ಇಂಥ ಪ್ರಯತ್ನಗಳಿಗೆ ಮೊದಲಿಗಿಂತ ಹೆಚ್ಚಿನ ವೇಗವನ್ನು ನೀಡಬೇಕಾಗಿದೆ,” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.

- Advertisement -
spot_img

Latest News

error: Content is protected !!