Friday, June 5, 2026
HomeಕರಾವಳಿDRDO ನಲ್ಲಿ  ಹೈದರಾಬಾದ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪುತ್ತೂರಿನ ಯುವ ವಿಜ್ಞಾನಿ ಆತ್ಮಹತ್ಯೆ

DRDO ನಲ್ಲಿ  ಹೈದರಾಬಾದ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪುತ್ತೂರಿನ ಯುವ ವಿಜ್ಞಾನಿ ಆತ್ಮಹತ್ಯೆ

- Advertisement -
- Advertisement -

ಪುತ್ತೂರು; DRDO ನಲ್ಲಿ ಹೈದರಾಬಾದ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪುತ್ತೂರಿನ ಯುವ ವಿಜ್ಞಾನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪುತ್ತೂರಿನ ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ(24) ಮೃತ ಯುವಕ.

ಈತ ಎರಡು ತಿಂಗಳ ಹಿಂದೆಯಷ್ಟೇ ಹೈದರಾಬಾದ್ ನಲ್ಲಿರುವ DRDO ಸಂಸ್ಥೆಗೆ ತಾತ್ಕಾಲಿಕ ನೆಲೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಈ ನಡುವೆ ಕಳೆದ ಒಂದು ವಾರದ ಹಿಂದೆ ಸಂಸ್ಥೆಗೆ ರಾಜೀನಾಮೆ ನೀಡಿ ಊರಿಗೆ ಬಂದಿದ್ದ. ಆದರೆ ಸಂಸ್ಥೆಗೆ ರಾಜೀನಾಮೆ ಪತ್ರ ನೀಡಿದ್ದರೂ ರಾಜೀನಾಮೆ ಸ್ವೀಕಾರ ಮಾಡಿರಲಿಲ್ಲ ಎನ್ನಲಾಗಿದೆ.

ಇನ್ನು ನಿನ್ನೆ ರಾತ್ರಿ DRDO ಕಛೇರಿಯಿಂದ ಫೋನ್ ಬಂದಿತ್ತು ಎಂದು ಹೇಳಲಾಗಿದ್ದು, ಮನೆಯ ಸಮೀಪದ ತಮ್ಮ ತೋಟದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತಂತೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!