Thursday, June 25, 2026
Homeತಾಜಾ ಸುದ್ದಿಭೀಕರ ರಸ್ತೆ ಅಪಘಾತ- ಸ್ಥಳದಲ್ಲೇ ಸಾವನ್ನಪ್ಪಿದ ಐವರು!..

ಭೀಕರ ರಸ್ತೆ ಅಪಘಾತ- ಸ್ಥಳದಲ್ಲೇ ಸಾವನ್ನಪ್ಪಿದ ಐವರು!..

- Advertisement -
- Advertisement -

ಚಿತ್ರದುರ್ಗ:ಇಲ್ಲಿನ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದಲ್ಲಿ ಬಸ್ ಮತ್ತು ಕ್ರೂಸರ್ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕ್ರೂಸರ್ ವಾಹನದಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.ಇತರ ಏಳು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ರೂಸರ್ ವಾಹನವು ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಬೆಂಗಳೂರಿನಿಂದ ಲಿಂಗಸುಗೂರಿನತ್ತ ತೆರಳುತ್ತಿದ್ದ ಬಸ್ ಗೆ ಮುಖಾಮುಖಿ ಢಿಕ್ಕಿಯಾಗಿದೆ.ಈ ಕುರಿತು ಪ್ರಕರಣ ದಾಖಲಾಗಿದ್ದು ತನಿಖೆ ಮುಂದು ವರಿದಿದೆ.

- Advertisement -

Latest News

error: Content is protected !!