Sunday, June 14, 2026
Homeಕರಾವಳಿಉಡುಪಿಕಾರ್ಕಳ: ಕುಡಿದ ಅಮಲಿನಲ್ಲಿ ಬೈಕ್ ಸವಾರನಿಂದ ಅಡ್ಡಾದಿಡ್ಡಿ ಬೈಕ್ ಚಾಲನೆ: ರಿಕ್ಷಾಕ್ಕೆ ಡಿಕ್ಕಿ ಹೊಡೆದು ಸಾರ್ವಜನಿಕರಿಂದ...

ಕಾರ್ಕಳ: ಕುಡಿದ ಅಮಲಿನಲ್ಲಿ ಬೈಕ್ ಸವಾರನಿಂದ ಅಡ್ಡಾದಿಡ್ಡಿ ಬೈಕ್ ಚಾಲನೆ: ರಿಕ್ಷಾಕ್ಕೆ ಡಿಕ್ಕಿ ಹೊಡೆದು ಸಾರ್ವಜನಿಕರಿಂದ ಮಂಗಳರಾತಿ ಮಾಡಿಸಿಕೊಂಡ ಯುವಕರು

- Advertisement -
- Advertisement -

ಕಾರ್ಕಳ: ಕುಡಿದ ಅಮಲಿನಲ್ಲಿ ಬೈಕ್ ಸವಾರ ಅಡ್ಡಾದಿಡ್ಡಿ ಬೈಕ್ ಚಾಲನೆ ಮಾಡಿ ಆಟೊ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಬೈಕ್ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಬೈಕ್ ಸವಾರರಿಬ್ಬರು ಹಾರ್ಜಡ್ಡು ನಿವಾಸಿಗಳೆಂದು ತಿಳಿದುಬಂದಿದ್ದು. ಇವರು ಮದ್ಯಪಾನ ಮಾಡಿ ಬೈಕ್ ಸವಾರಿ ಮಾಡಿಕೊಂಡು ಹೋಗುತ್ತಿದ್ದರು. ಹಿರ್ಗಾನ ಮುಖ್ಯ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಮದ್ಯ ಅಮಲಿನಲ್ಲಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಬೈಕ್ ಸಮೇತ ರಸ್ತೆಗೆ ಬಿದ್ದ ಸವಾರರಿಬ್ಬರು ಸಣ್ಣಪುಟ್ಟಗಳೊಂದಿಗೆ ಪಾರಾಗಿದ್ದಾರೆ. ಆಟೋ ಚಾಲಕ ಕೂಡ ಸ್ಥಳೀಯರಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಒಟ್ಟುಗೂಡಿದ್ದು, ಮದ್ಯದ ಅಮಲಿನಲ್ಲಿ ತೇಲುತ್ತಿದ್ದ ಬೈಕ್ ಸವಾರರಿಬ್ಬರನ್ನು ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!