Saturday, June 6, 2026
Homeಕರಾವಳಿಉಡುಪಿಉಡುಪಿ: ಎರಡನೇ ಹಂತದ ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಶಾಸಕರಿಂದ ಚಾಲನೆ

ಉಡುಪಿ: ಎರಡನೇ ಹಂತದ ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಶಾಸಕರಿಂದ ಚಾಲನೆ

- Advertisement -
- Advertisement -

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಳೆದ ಬಾರಿ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗಿತ್ತು. ಈ ಬಾರಿ ಎರಡನೇ ಹಂತದ ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡೆಕಾರ್ ಹಾಗೂ ಕುತ್ಪಾಡಿಯಲ್ಲಿ ಚಾಲನೆ ನೀಡಲಾಯಿತು. ಈ ಭಾಗದ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ಇಂದು ಕೇದಾರೋತ್ಥಾನ ಟ್ರಸ್ಟ್ ನ ಅಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ರವರು ಸಭೆ ನಡೆಸಿ ಚರ್ಚಿಸಿದರು.

ಬಳಿಕ ಕುತ್ಪಾಡಿ ಗರಡಿ ಬಳಿ ಭೂ ಮಾತೆಗೆ ಹಾಲನ್ನು ಅರ್ಪಿಸಿ ಉಳುಮೆ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಶಾಸಕರಾದ ಕೆ. ರಘುಪತಿ ಭಟ್ ಅವರು ಟ್ರಾಕ್ಟರ್ ನಲ್ಲಿ ಉಳುಮೆ ಮಾಡುವ ಮೂಲಕ 2ನೇ ಹಂತದ ಹಡಿಲು ಭೂಮಿ ಕೃಷಿಗೆ ಚಾಲನೆ ನೀಡಿದರು.

- Advertisement -

Latest News

error: Content is protected !!