- Advertisement -
- Advertisement -
ಉಡುಪಿ: ಕಾರಿನಲ್ಲಿ ಎಸಿ ಹಾಕಿ ನಿದ್ದೆಗೆ ಜಾರಿದ ವ್ಯಕ್ತಿ ಉಸಿರುಗಟ್ಟಿ
ಸಾವನ್ನಪ್ಪಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಗುರುರಾಜ್ (32) ಮೃತ ದುರ್ದೈವಿ. ಗುರುರಾಜ್ ಅಣ್ಣನ ಸ್ನೇಹಿತನೊಂದಿಗೆ ತನ್ನ ತಂದೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ರಾತ್ರಿ ಆಸ್ಪತ್ರೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲದ ಹಿನ್ನೆಲೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ತನ್ನದೇ ಕಾರಿನಲ್ಲಿ ಗ್ಲಾಸ್ ಮುಚ್ಚಿ ಎಸಿ ಹಾಕಿ ಮಲಗಿದ್ದರು.
ಉಸಿರುಗಟ್ಟಿ ಸಾವನ್ನಪ್ಪಲು ನಿಖರ ಕಾರಣ ಮರಣೋತ್ತರ ಪರೀಕ್ಷೆ ವರದಿ ಬಳಿಕವಷ್ಟೇ ತಿಳಿಯಬೇಕಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -