Wednesday, June 3, 2026
Homeಕರಾವಳಿಮಂಗಳೂರುಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

- Advertisement -
- Advertisement -

ಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬಿ.ಸಿ.ರೋಡು- ಕೈಕಂಬ ಮಧ್ಯೆ ಮಂಗಳವಾರ ಮುಂಜಾನೆ ನಡೆದಿದೆ. ಕೊಳ್ನಾಡು ನೂಜಿಬೈಲು ಭಂಡಾರದಮನೆ ನಿವಾಸಿ ಜಯರಾಮ್ (50) ಮೃತ ಕಾರು ಚಾಲಕ.

ಜಯರಾಮ್ ಅವರು ತುಂಬೆ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದು, ಮುಂಜಾನೆ 4.30ರ ಸುಮಾರಿಗೆ ಅವರು ಚಲಾಯಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!