Saturday, November 7, 2026
Homeಕರಾವಳಿಚಾಲಕನ ನಿಯಂತ್ರಣ ತಪ್ಪಿ ಹಣ್ಣಿನ ಅಂಗಡಿಗೆ ಢಿಕ್ಕಿ ಹೊಡೆದ ಕಾರು; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ...

ಚಾಲಕನ ನಿಯಂತ್ರಣ ತಪ್ಪಿ ಹಣ್ಣಿನ ಅಂಗಡಿಗೆ ಢಿಕ್ಕಿ ಹೊಡೆದ ಕಾರು; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

- Advertisement -
- Advertisement -

ಉಳ್ಳಾಲ: ದೇರಳಕಟ್ಟೆ ಮಸೀದಿಯ ಎದುರಿನ ಚತುಷ್ಪಥ ರಸ್ತೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಣ್ಣಿನ ಅಂಗಡಿಗೆ ಢಿಕ್ಕಿ ಹೊಡೆದ ಘಟನೆ ನ.7ರ ಶನಿವಾರ ಬೆಳಗ್ಗೆ ನಡೆದಿದೆ. ಘಟನೆಯ ವೇಳೆ ಅಂಗಡಿಯಲ್ಲಿ ಗ್ರಾಹಕರು ಇಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.

ಮಂಗಳೂರು ಕಡೆಯಿಂದ ನಾಟೆಕಲ್ ಕಡೆಗೆ ತೆರಳುತ್ತಿದ್ದ ಕಾರಿನ ಚಾಲಕನಿಗೆ ಏಕಾಏಕಿ ರಕ್ತದೊತ್ತಡ ಕಡಿಮೆಯಾಗಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ವಾಹನಗಳಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಕಾರನ್ನು ಎಡಕ್ಕೆ ತಿರುಗಿಸಿದ್ದು, ನಿಯಂತ್ರಣ ತಪ್ಪಿದ ಕಾರು ನೇರವಾಗಿ ಹಣ್ಣಿನ ಅಂಗಡಿಗೆ ಢಿಕ್ಕಿ ಹೊಡೆದಿದೆ.

ಘಟನೆ ನಡೆದ ಸಂದರ್ಭದಲ್ಲಿ ಅಂಗಡಿ ಮಾಲೀಕರು ಅಂಗಡಿ ತೆರೆದು ಹಣ್ಣುಗಳನ್ನು ಹೊರಗಿಡುತ್ತಿದ್ದರು. ಅದೃಷ್ಟವಶಾತ್, ಅಂಗಡಿಯಲ್ಲಿ ಗ್ರಾಹಕರು ಇರಲಿಲ್ಲ. ಅಂಗಡಿ ಮಾಲೀಕ ಹಾಗೂ ಕಾರು ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಈ ರಸ್ತೆ ಬದಿಯಲ್ಲಿ ಬೆಳಗ್ಗೆ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಾರೆ. ಆದರೆ, ಘಟನೆ ನಡೆದ ಸಮಯದಲ್ಲಿ ಅಲ್ಲಿ ಯಾರೂ ಇಲ್ಲದಿದ್ದರಿಂದ ಮತ್ತೊಂದು ದೊಡ್ಡ ಅನಾಹುತ ತಪ್ಪಿದಂತಾಗಿದೆ. ಢಿಕ್ಕಿಯ ರಭಸಕ್ಕೆ ಅಂಗಡಿಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದೆ.

ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಕಾರನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು. ಸಂಚಾರಿ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು, ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

- Advertisement -

Latest News

error: Content is protected !!