Sunday, June 14, 2026
Homeಅಪರಾಧಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಘಟನೆಯಲ್ಲಿ ಮೂವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಘಟನೆಯಲ್ಲಿ ಮೂವರಿಗೆ ಗಾಯ

- Advertisement -
- Advertisement -
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ನಿಸರ್ಗ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. 

ಕಾರು ಚಾಲಕನ ನಿಯಂತ್ರಣ ತಪ್ಪಿ ಬಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ. ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುವ ಸಂದರ್ಭದಲ್ಲಿ ಕೊಟ್ಟಿಗೆಹಾರದಲ್ಲಿ ಈ ಅವಘಡ ಸಂಭವಿಸಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಗಾಯಕ್ಕೀಡಾಗಿದ್ದಾರೆ.

ಗಾಯಾಳುಗಳನ್ನು ಕೂಡಲೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈ ಸಂಬಂಧ ಬಣಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!