ತುಮಕೂರು: ಸುಮ್ನೆ ಇರಲಾರದೇ ಇರುವೆ ಬಿಟ್ಟುಕೊಂಡ ಅನ್ನೋ ಮಾತು ಸದ್ಯಕ್ಕೆ ಡ್ರೋಣ್ ಪ್ರತಾಪ್ ಅವರಿಗೆ ಸರಿಯಾಗಿಯೇ ಮ್ಯಾಚ್ ಆಗುತ್ತೆ. ಸೈನ್ಸ್ ಎಕ್ಸ್ ಪೆರಿಮೆಂಟ್ ಮಾಡಲು ಹೋಗಿ ಇದೀಗ ಕಂಬಿ ಹಿಂದೆ ಸೇರಿದ್ದಾರೆ ಡ್ರೋಣ್ ಪ್ರತಾಪ್.
ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ನಡೆಸಿದ್ದ ಸ್ಫೋಟ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ಬಾಸ್ ಖ್ಯಾತಿಯ ಡ್ರೋಣ್ ಪ್ರತಾಪ್ ಅವರನ್ನು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ.
, ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮ ಸಮೀಪದ ಕೃಷಿ ಹೊಂಡವೊಂದರಲ್ಲಿ ಪ್ರತಾಪ್ ಸೋಡಿಯಂ ಮೆಟಲ್ ಬಳಸಿಕೊಂಡು, ಅದು ನೀರಿಗೆ ಬೆರೆತಾಗ ಹೇಗೆ ಸ್ಫೋಟವಾಗುತ್ತೆ ನೋಡಿ ಎಂಬ ಎಕ್ಸಪೆರಿಮೆಂಟ್ ಮಾಡಿರುವ ಸೈನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಡ್ರೋಣ್ ಹಂಚಿಕೊಂಡಿದ್ದರು. ಈ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು, ಘಟನೆ ಸಂಬಂಧ BNS ಸೆಕ್ಷನ್ 288, ಸ್ಫೋಟವಸ್ತು ನಿಯಂತ್ರಣ ಕಾಯ್ದೆ 3ರಡಿ ಮಿಡಿಗೇಶಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್ ರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಏನೋ ಮಾಡಲು ಹೋದ ಪ್ರತಾಪ್ ಇದೀಗ ಅರೆಸ್ಟ್ ಆಗಿದ್ದಾರೆ. ಸದ್ಯಕ್ಕೆ ನೆಟಿಜನ್ಸ್ ನಿನಗಿದು ಬೇಕಿತ್ತಾ ಮಗನೇ ಅಂತಿದ್ದಾರೆ.