Thursday, June 4, 2026
Homeತಾಜಾ ಸುದ್ದಿಚರ್ಮಗಂಟು ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ; ಜನವರಿ 15 ರ ವೇಳೆಗೆ ಎಲ್ಲಾ ಜಾನುವಾರುಗಳಿಗೆ...

ಚರ್ಮಗಂಟು ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ; ಜನವರಿ 15 ರ ವೇಳೆಗೆ ಎಲ್ಲಾ ಜಾನುವಾರುಗಳಿಗೆ ಲಸಿಕೆ

- Advertisement -
- Advertisement -

ಬೆಳಗಾವಿ ; ರಾಜ್ಯದಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಜನವರಿ 15 ರ ವೇಳೆಗೆ ಎಲ್ಲಾ ಜಾನುವಾರುಗಳಿಗೆ ಲಸಿಕೆ ನೀಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹ್ವಾಣ್ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಚರ್ಮಗಂಟು ರೋಗ ನಿಯಂತ್ರಿಸುವ ಸಲುವಾಗಿ ಈಗಾಗಲೇ 92 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಮುಂದಿನ ವರ್ಷದ ಜನವರಿ 15 ರ ವೇಳೆಗೆ ಎಲ್ಲಾ ರಾಸುಗಳಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.

ರಾಸುಗಳಿಗೆ ಚರ್ಮಗಂಟು ರೋಗ 22 ರಾಜ್ಯಗಳಲ್ಲಿ ಬಂದಿದೆ. ರಾಜಸ್ಥಾನದಲ್ಲಿ 75 ಸಾವಿರ ಸಾವು ಸಂಭವಿಸಿದ್ದು, ರಾಜ್ಯದಲ್ಲಿ ಈವರೆಗೆ 22 ಸಾವಿರ ರಾಸುಗಳಿಗೆ ಮಾತ್ರ ಸಾವನ್ನಪ್ಪಿವೆ ಎಂದು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!