Thursday, June 25, 2026
Homeಕರಾವಳಿಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಅರೆಸ್ಟ್

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಅರೆಸ್ಟ್

- Advertisement -
- Advertisement -

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ಅರೆಸ್ಟ್ ಆಗಿದ್ದಾನೆ.ಬಂಧಿತ ಆರೋಪಿಯನ್ನು ಬಂಟ್ವಾಳ ನಿವಾಸಿ ಆಸೀಫ್ @ ಆಚಿ(32) ಬಂಧಿತ.

ಆರೋಪಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ. ಈತನನ್ನು ಬಂಧಿಸಿ 27 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಎಂಡಿಎಂಎ ನ್ನು ಬೆಂಗಳೂರಿನಲ್ಲಿ ಖರೀದಿಸಿ ಮಂಗಳೂರಿಗೆ ಸಾಗಾಟ ಮಾಡಿಕೊಂಡು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯಿಂದ 1,35,000/- ಮೌಲ್ಯದ 27 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,45,500/- ಆಗಬಹುದು. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

- Advertisement -

Latest News

error: Content is protected !!