Friday, May 17, 2024
Homeಕರಾವಳಿಮಾದಕ ವಸ್ತು ಮಾರಾಟ ಪ್ರಕರಣ; ಆರೋಪಿಗಳ ಸಹಿತ ಮಾರಾಟಕ್ಕೆ ಬಳಸಿಕೊಂಡ ವಾಹನ ವಶಡಿಸಿಕೊಂಡ ಪೊಲೀಸರು

ಮಾದಕ ವಸ್ತು ಮಾರಾಟ ಪ್ರಕರಣ; ಆರೋಪಿಗಳ ಸಹಿತ ಮಾರಾಟಕ್ಕೆ ಬಳಸಿಕೊಂಡ ವಾಹನ ವಶಡಿಸಿಕೊಂಡ ಪೊಲೀಸರು

spot_img
- Advertisement -
- Advertisement -

ಪುತ್ತೂರು: ಉಪ್ಪಿನಂಗಡಿ ಗ್ರಾಮದ ಮೆಕ್ಷಿಕೋ ಹೋಟೆಲ್ ಎದುರು ರಾ.ಹೆ 75ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಸಬ್ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆಯಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರು ತಪಾಸಣೆಯ ನಿಮಿತ್ತ ವೆನ್ಯೂ ವಾಹನ ನಂಬ್ರ KA-21-Z-1864 ನೇ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ, ಸದರಿ ವಾಹನವನ್ನು ನಿಲ್ಲಿಸಿದ ಚಾಲಕ ಹಾಗೂ ವಾಹನದಲ್ಲಿದ್ದ ಇನ್ನಿಬ್ಬರು ಪರಾರಿಯಾಗಲು ಯತ್ನಿಸಿದಾಗ ಅವರನ್ನು ಹಿಡಿದುಕೊಂಡು ವಿಚಾರಿಸಲಾಗಿತ್ತು

ವಾಹನದಲ್ಲಿದ್ದ ಆರೋಪಿಗಳನ್ನು ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಸುಶ್ರುತ ಕೃಷ್ಣ.ಜೆ.ಕೆ (32), ನೆರಿಯ ಗ್ರಾಮದ ಸೆಬಾಸ್ಟಿಯನ್ (31), ಕೇರಳ ಜಿಲ್ಲೆಯ ತೊಡುಪುಯ ತಾಲೂಕು ವನ್ನಪುರಂ ಗ್ರಾಮದ ಅನಿಲ್ ತೋಮಸ್ (31ಎಂಬುವುದಾಗಿ ತಿಳಿಸಿರುತ್ತಾರೆ.

ಸದರಿ ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಅಂದಾಜು ರೂ 45.000/- ಮೌಲ್ಯದ 22.4 ಮಿಲಿ ಗ್ರಾಂ ತೂಕದ ಎಂ ಡಿ ಎಂ ಎ ಎಂಬ ಮಾದಕ ವಸ್ತು ಪತ್ತೆಯಾಗಿದ್ದು, ಮುಂದಿನ ಕಾನೂನುಕ್ರಮಕ್ಕಾಗಿ ಆರೋಪಿಗಳೊಂದಿಗೆ, ಸದರಿ ಮಾದಕವಸ್ತು, ಆರೋಪಿಗಳ ಬಳಿಯಿದ್ದ 03 ಮೊಬೈಲ್ ಪೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 162/2023 ಕಲಂ: U/s-8(c) 22(b) ಎನ್.ಡಿ.ಪಿ.ಎಸ್ ಕಾಯ್ದೆ r/w 34 ipc ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -
spot_img

Latest News

error: Content is protected !!