Saturday, June 6, 2026
Homeತಾಜಾ ಸುದ್ದಿಬೆಂಗಳೂರಿನಲ್ಲಿ ಮತ್ತೆ ಸದ್ದು ಮಾಡುತ್ತಿದೆ ಮಾದಕ ದಂಧೆ: ಕಿರುತೆರೆ ನಟ ಸೇರಿ ಮೂವರ ಬಂಧನ

ಬೆಂಗಳೂರಿನಲ್ಲಿ ಮತ್ತೆ ಸದ್ದು ಮಾಡುತ್ತಿದೆ ಮಾದಕ ದಂಧೆ: ಕಿರುತೆರೆ ನಟ ಸೇರಿ ಮೂವರ ಬಂಧನ

- Advertisement -
- Advertisement -

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಾದಕ ದಂಧೆ ಮತ್ತೆ ಸದ್ದು ಮಾಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ಸಹನಟ ಸೇರಿದಂತೆ ಮೂವರನ್ನು ಸಿಲಿಕಾನ್ ಸಿಟಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಶಿಯಾಜ್, ಮಹಮ್ಮದ್ ಶಾಹೀದ್, ಮಂಗಲ್ ತೋಡಿ, ಜಿತೀನ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೇರಳ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಮಾದಕ ದಂಧೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಬಂಧಿತ ಆರೋಪಿಗಳಿಂದ ಪೊಲೀಸರು ಬರೋಬ್ಬರಿ 13 ಲಕ್ಷ ಮೌಲ್ಯದ 191 ಗ್ರಾಂ ಎಂಡಿಎಂಎ ಹಾಗೂ 2.80 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬಂಧಿರ ಪೈಕಿ ಶಿಯಾಜ್ ಮಲಯಾಳಂ ಕಿರುತೆರೆಯಲ್ಲಿ ಸಹ ನಟನಾಗಿ ಕೆಲಸ ಮಾಡಿಕೊಂಡಿದ್ದನು. ಹಾಗೂ ಶಾಹೀದ್ ಒಂದು ಮೊಬೈಲ್ ಶಾಪ್ ನಲ್ಲಿ ಕೆಲಸಕ್ಕೆ ಇದ್ದನು ಎಂಬುದಾಗಿ ತಿಳಿದು ಬಂದಿದೆ. ಸದ್ಯ ಈ ಸಂಬಂಧ ಹೆಚ್ ಎಸ್ ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -

Latest News

error: Content is protected !!