- Advertisement -


- Advertisement -
ಮಂಗಳೂರು: ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಬರ್ಕೆ ಪೊಲೀಸರ ತಂಡ ಮಾದಕ ದ್ರವ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ರಾಜಸ್ತಾನ ಮೂಲದ ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ವಾಸುದೇವ (48), ಮಂಗಲ್ ಚೌಧರಿ (45) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳಿಂದ 186 ಗ್ರಾಂ ಓಪಿಯಂ ಮಾದಕ ದ್ರವ್ಯ ಹಾಗೂ 40 ಸಾವಿರ ರೂ. ಮೌಲ್ಯದ ಐಫೋನ್, 50 ಸಾವಿರ ರೂ. ಮೌಲ್ಯದ ಬೈಕ್ ವಶಕ್ಕೆ ಪಡೆಯಲಾಗಿದೆ.
- Advertisement -


