Friday, June 5, 2026
Homeತಾಜಾ ಸುದ್ದಿಇದು ದೇಶವೇ ಬೆಚ್ಚಿ ಬೀಳಿಸುವ ಘಟನೆ; 25 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ನ್ನು ವಶಕ್ಕೆ...

ಇದು ದೇಶವೇ ಬೆಚ್ಚಿ ಬೀಳಿಸುವ ಘಟನೆ; 25 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಕೇರಳದಲ್ಲಿ ಇಡೀ ದೇಶವೇ ಬೆಚ್ಚಿ ಬೇಳಿಸುವಷ್ಟು ಪ್ರಮಾಣದ ಡ್ರಗ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ. ಕೊಚ್ಚಿ ಬಂದರಿನಲ್ಲಿ ಬರೋಬ್ಬರಿ 25 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಾದಕ ವಸ್ತು ನಿಗ್ರಹ ದಳ ಹಾಗೂ ಭಾರತೀಯ ನೌಕಾಪಡೆ ಶನಿವಾರ ಕೇರಳದ ಕೊಚ್ಚಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಬಂದರಿಗೆ ಆಗಮಿಸಿದ ನೌಕೆಯಿಂದ 134 ಚೀಲಗಳಲ್ಲಿ ತುಂಬಿದ್ದ ಮಾದಕ ವಸ್ತು ಪತ್ತೆ ಮಾಡಿತ್ತು. ಈ ಮಾದಕ ವಸ್ತುವಿನ ಮೌಲ್ಯ ಬರೋಬ್ಬರಿ 25,000 ಕೋಟಿ ರೂ. ಎಂದು ಎನ್‌ಸಿಬಿ ಹೇಳಿದೆ.


ಎನ್‌ಸಿಬಿ ಹಾಗೂ ನೌಕಾಪಡೆ ವಶಪಡಿಸಿಕೊಂಡ ಹೈ ಪ್ಯೂರಿಟಿ ಮೆಥಾಂಪೆಟಮೈನ್‌ನ ಎಣಿಕೆ ಪೂರ್ಣಗೊಂಡಿದೆ. ಒಟ್ಟು 2,525 ಕೆಜಿ ತೂಕದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದು, ಇದರ ಬೆಲೆಯನ್ನು ಆರಂಭದಲ್ಲಿ 12,000 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. ಆದರೆ ಡ್ರಗ್ಸ್ ನ ಗುಣಮಟ್ಟ ಪರಿಶೀಲನೆ ಬಳಿಕ ಇದರ ಬೆಲೆ 25,000 ಕೋಟಿ ರೂ. ನಷ್ಟಿದೆ ಎಂದು ಅಂದಾಜಿಸಲಾಗಿದೆ.

ಮೂಲಗಳ ಪ್ರಕಾರ ಉತ್ಕೃಷ್ಟ ಗುಣಮಟ್ಟದ ಡ್ರಗ್ಸ್ ಅನ್ನು ಭಾರತ, ಶ್ರೀಲಂಕಾ ಹಾಗೂ ಮಾಲ್ಡೀವ್ಸ್‌ಗೆ ಸಾಗಿಸಲೆಂದು ಹಡಗಿನಲ್ಲಿ ತರಲಾಗಿತ್ತು. ತನಿಖೆ ವೇಳೆ ಅಫ್ಘಾನಿಸ್ತಾನದಲ್ಲಿ ಉತ್ಪಾದಿಸಲಾಗಿದ್ದ ಡ್ರಗ್ಸ್ ಅನ್ನು ಪಾಕಿಸ್ತಾನ-ಇರಾನ್ ಸನಿಹದ ಮಕ್ರಾಮ್ ಕರಾವಳಿಯಿಂದ ಮದರ್ ಶಿಪ್ ಎಂಬ ಹಡಗಿನಲ್ಲಿ ತರಲಾಗುತ್ತಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಬ್ಬ ಶಂಕಿತ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಲಾಗಿದೆ

- Advertisement -

Latest News

error: Content is protected !!