Thursday, June 4, 2026
Homeಕರಾವಳಿಉಡುಪಿಉಡುಪಿ: ಗಾಂಜಾ, ಎಂಡಿಎಂಎ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರ ಬಂಧನ

ಉಡುಪಿ: ಗಾಂಜಾ, ಎಂಡಿಎಂಎ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರ ಬಂಧನ

- Advertisement -
- Advertisement -

ಉಡುಪಿ: ಗಾಂಜಾ, ಎಂಡಿಎಂಎ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿಯಲ್ಲಿ  ಬಂಧಿಸಲಾಗಿದೆ. ಅಬ್ದುಲ್ ರೆಹಮಾನ್ ಹಾಗೂ ಅಬ್ದುಲ್ ಸಮದ್ ಬಂಧಿತ ಆರೋಪಿಗಳು. ಬಂಧಿತರು ಆರೋಪಿಗಳು ಭಟ್ಕಳ ಮತ್ತು ಉಡುಪಿ ಮೂಲದವರು ಎಂದು ತಿಳಿದು ಬಂದಿದೆ.

ಡಿ.ವೈ.ಎಸ್.ಪಿ ಶ್ರೀಕಾಂತ್, ಸಿಪಿಐ ಸಂತೋಷ್ ಕಾಯ್ಕಿಣಿ ನೇತೃತ್ವದ ಕಾರ್ಯಾಚರಣೆ ನಡೆಸಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 30ಗ್ರಾಂ ತೂಕದ ಗಾಂಜಾ,11,420 ಗ್ರಾಂ ತೂಕದ ಎಂ.ಡಿ.ಎಂ.ಎ ಹರಳು ಹಾಗೂ ಕಾರನ್ನು ವಶಕ್ಕೆ ಪಡೆಯಲಾಗಿದೆ.ಗಾಂಜಾ ಉಡುಪಿಯಿಂದ ಉತ್ತರಕನ್ನಡ ಜಿಲ್ಲೆಯ ಕಡೆಗೆ ಆರೋಪಿಗಳು ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ.  ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!