Thursday, June 4, 2026
Homeತಾಜಾ ಸುದ್ದಿಬೆಂಗಳೂರಿನಲ್ಲಿ ಇನ್ಮುಂದೆ ವಾರದಲ್ಲಿ 4 ದಿನ ಡ್ರಂಕ್‌ &ಡ್ರೈವ್‌ ತಪಾಸಣೆ

ಬೆಂಗಳೂರಿನಲ್ಲಿ ಇನ್ಮುಂದೆ ವಾರದಲ್ಲಿ 4 ದಿನ ಡ್ರಂಕ್‌ &ಡ್ರೈವ್‌ ತಪಾಸಣೆ

- Advertisement -
- Advertisement -

ಬೆಂಗಳೂರು: ದಿನಗಳೆದಂತೆ ನಗರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅವುಗಳಿಗೆ ಕಡಿವಾಣ ಹಾಕಲು ಬೆಂಗಳೂರು ಸಂಚಾರ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

ಈವರೆಗೂ ಡ್ರಂಕ್‌ ಆ್ಯಂಡ್‌ ಡ್ರೈವ್‌ ತಪಾಸಣೆಯನ್ನು ವಾರಾಂತ್ಯದಲ್ಲಿ ಮಾತ್ರ ಮಾಡುತ್ತಿದ್ದ ಸಂಚಾರ ಪೊಲೀಸರಿಗೆ, ಇದೀಗ ಮಹಿಳೆಯರ ಸುರಕ್ಷತೆಗಾಗಿ ವಾರಕ್ಕೆ ನಾಲ್ಕು ದಿನಗಳ ಕಾಲ ಡ್ರಂಕ್‌ ಆ್ಯಂಡ್‌ ಡ್ರೈವ್‌ ತಪಾಸಣೆ ನಡೆಸುವಂತೆ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಎಂ.ಎನ್‌.ಅನುಚೇತ್‌ ಆದೇಶ ಹೊರಡಿಸಿದ್ದಾರೆ.

ಸಿಸಿ ಕ್ಯಾಮೆರಾಗಳಿರುವ ಜಂಕ್ಷನ್‌ಗಳಲ್ಲಿ ಪರಿಶೀಲಿಸಿ ಪ್ರಕರಣ ದಾಖಲಿಸುವಾಗ ಮಹಿಳಾ ಸಿಬ್ಬಂದಿ ನಿಯೋಜಿಸುವಂತೆ ಹಾಗೂ ಬೆಂಗಳೂರು ನಗರದ ಎಲ್ಲಾ ಪೊಲೀಸ್‌ ಠಾಣೆಯ ಪಿಎಸ್‌ಐಗಳಿಂದ ವಿಶೇಷ ಕಾರ್ಯಾಚರಣೆ ಮಾಡುವಂತೆಯು ಸೂಚಿಸಲಾಗಿದೆ.

ಮಹಿಳೆಯರ ಸುರಕ್ಷತೆಗೆ ಕಾರ್ಯಾಚರಣೆ: ಮಹಿಳೆಯರಿದ್ದ ವಾಹನ ಅಪಘಾತದ ಕುರಿತು ದೂರುಗಳು ಬಂದಲ್ಲಿ ತಕ್ಷಣ ಸ್ಪಂದಿಸಬೇಕು. ಮಹಿಳಾ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಅಗತ್ಯ ಕ್ರಮ ಕೈಗೊಳ್ಳಬೇಕು. ರಾತ್ರಿ ವೇಳೆ ಹಾಗೂ ಬೆಳಗಿನ ಜಾವದಲ್ಲಿ ವ್ಹೀಲಿಂಗ್‌ ಮಾಡುವ ಸ್ಥಳಗಳು ಗುರುತಿಸಬೇಕು. ಮುಂಜಾಗ್ರತಾ ಕ್ರಮಗಳೊಂದಿಗೆ ನಿಗಾವಹಿಸುವುದು. ರಾತ್ರಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಠಾಣಾ ಸರಹದ್ದಿನಲ್ಲಿರುವ ಸಿಗ್ನಲ್‌ ಲೈಟ್‌ಗಳು, ಸಿಸಿ ಕ್ಯಾಮೆರಾಗಳು ಹಾಗೂ ಸರ್ಕಾರಿ ಸ್ವತ್ತುಗಳ ಬಗ್ಗೆ ಗಸ್ತು ವೇಳೆ ನಿಗಾವಹಿಸಬೇಕು ಸೇರಿದಂತೆ ಹತ್ತಾರು ಸೂಚನೆಗಳನ್ನು ನೀಡಲಾಗಿದೆ ಎಂಬುವುದನ್ನು ಪೊಲೀಸ್‌ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!