Wednesday, July 22, 2026
Homeಕರಾವಳಿಡಿಎಸ್ಎಸ್ ಸಂಸ್ಥಾಪಕ, ರಾಜ್ಯ ಸಂಘಟನಾ ಸಂಚಾಲಕ ಎಂ. ದೇವದಾಸ್ ನಿಧನ

ಡಿಎಸ್ಎಸ್ ಸಂಸ್ಥಾಪಕ, ರಾಜ್ಯ ಸಂಘಟನಾ ಸಂಚಾಲಕ ಎಂ. ದೇವದಾಸ್ ನಿಧನ

- Advertisement -
- Advertisement -

ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿಯ (DSS) ಸಂಸ್ಥಾಪಕ ನಾಯಕರಲ್ಲಿ ಒಬ್ಬರು ಹಾಗೂ ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ಎಂ. ದೇವದಾಸ್ (65) ಅವರು ಬುಧವಾರ ಹೃದಯಾಘಾತದಿಂದ ನಿಧನರಾದರು.

ಮಂಗಳೂರಿನಲ್ಲಿ ದಲಿತ ಸಂಘರ್ಷ ಸಮಿತಿಯನ್ನು ಪ್ರಾರಂಭಿಸಿ, ಸಂಘಟನೆಯನ್ನು ಕಟ್ಟಿ ಬೆಳೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಮೃತರ ಪಾರ್ಥಿವ ಶರೀರವನ್ನು ಬಜಪೆಯ ಸಿದ್ದಾರ್ಥ ನಗರದಲ್ಲಿರುವ ಅವರ ನಿವಾಸದಲ್ಲಿ ಮಧ್ಯಾಹ್ನ 2:00 ಗಂಟೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4:00 ಗಂಟೆಗೆ ಸಿದ್ದಾರ್ಥ ನಗರದಲ್ಲೇ ಅಂತಿಮ ಸಂಸ್ಕಾರದ ವಿಧಿ-ವಿಧಾನಗಳು ನೆರವೇರಲಿವೆ.

ಮೃತರು ಪತ್ನಿ, ಇಬ್ಬರು ಹೆಣ್ಣುಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!