Monday, June 29, 2026
Homeಅಪರಾಧಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ,ಯುವತಿಯನ್ನು ಡ್ರಾಪ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ,ಯುವತಿಯನ್ನು ಡ್ರಾಪ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ

- Advertisement -
- Advertisement -

ಬೆಳ್ತಂಗಡಿ : ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿಯೊಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಮುಗಿದು ಬುಧವಾರ ರಾತ್ರಿ ಬೆಂಗಳೂರು ಊರಿಗೆ ಲಗೇಜ್ ಜೊತೆ ತೆರಳಲು ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆ.2 ರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡ ನಿನಗೆ ಹಿಂದೂ ಯುವತಿಯರೆ ಬೇಕಾ ಎಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ.ಯುವಕ ಸಧ್ಯ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಅವರ ಏಳನೇ ಪುತ್ರ ಆಟೋ ಚಾಲಕ ಮೊಹಮ್ಮದ್ ಅಶೀಕ್(22) ಮೇಲೆ ಆ‌.2 ರಂದು ರಾತ್ರಿ ಸುಮಾರು 9 ಗಂಟೆಗೆ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದ ಮುಂದೆ ಹಲ್ಲೆ ನಡೆದಿದ್ದು . ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಅನಿಲ್‌ ಕುಮಾರ್ ತಂಡದಿಂದ ಧರ್ಮಸ್ಥಳ ಸುತ್ತಮುತ್ತಲಿನ ಸಿಸಿಕ್ಯಾಮರದ ಸಹಾಯದಿಂದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!