Tuesday, July 1, 2025
Homeಕರಾವಳಿಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ನಿಧನ

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ನಿಧನ

spot_img
- Advertisement -
- Advertisement -

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಸುರಿಕುಮೇರು ಬಳಿ ನಡೆದಿದೆ.ಇರ್ಷಾದ್ ಉಮರ್ ಮೃತ ಯುವಕ.

ಇರ್ಷಾದ್ ಉಮರ್ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಊರಿಗೆ ಬಂದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರಕ್ತದ ಅವಶ್ಯಕತೆ ಇದ್ದಾಗ ಸಾಮಾಜಿಕ ಜಾಲತಾಣಗಳ ಮೂಲಕ‌ ಸಂದೇಶ ರವಾನಿಸಿ ರಕ್ತ ಸಂಗ್ರಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ.ಮೃತರು ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!