Saturday, June 28, 2025
Homeಕರಾವಳಿಬಂಟ್ವಾಳ; ಮಲಗಿದಲ್ಲೇ ಹೃದಯಾಘಾತವಾಗಿ ಯುವತಿ ಸಾವು

ಬಂಟ್ವಾಳ; ಮಲಗಿದಲ್ಲೇ ಹೃದಯಾಘಾತವಾಗಿ ಯುವತಿ ಸಾವು

spot_img
- Advertisement -
- Advertisement -

ಬಂಟ್ವಾಳ; ಮಲಗಿದಲ್ಲೇ ಹೃದಯಾಘಾತವಾಗಿ ಯುವತಿ ಸಾವನ್ನಪ್ಪಿರುವ ಘಟನೆ ಕಾವಳಪಡೂರು ಗ್ರಾಮದಲ್ಲಿ ನಡೆದಿದೆ. ಕಾವಳಪಡೂರು ಗ್ರಾಮದ ಮಧ್ವಗುತ್ತು ರಾಜೀವ ಶೆಟ್ಟಿ ಹಾಗೂ ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ(23) ಮೃತ ದುರ್ದೈವಿ.

ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್‌ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು, ಮಧ್ವದಲ್ಲಿ ದೊಡ್ಡಮ್ಮನ ಮನೆಯಲ್ಲಿ ತಾಯಿ ಜತೆ ವಾಸವಿದ್ದರು.ಮಂಗಳವಾರ ರಾತ್ರಿ ಊಟ ಮುಗಿಸಿ ತಾಯಿ ಜತೆ ಮಲಗಿದ್ದರು. ಬೆಳಗ್ಗೆ ಹೊತ್ತು ಕಳೆದರೂ ಏಳದಿರುವುದನ್ನು ಗಮನಿಸಿದ ತಾಯಿ ಎಬ್ಬಿಸುವಾಗ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

- Advertisement -
spot_img

Latest News

error: Content is protected !!