ನವದೆಹಲಿ: ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಬಳಸಲಾಗುವ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ಮತ್ತು ಅಶೋಕ್ ಹಾಲ್‌ಗಳ ಹೆಸರುಗಳನ್ನು ಕ್ರಮವಾಗಿ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಮರುನಾಮಕರಣ ಮಾಡಲಾಗಿದೆ.
ರಾಷ್ಟ್ರಪತಿ ಭವನದ ಕಾರ್ಯಾಲಯವು ಪ್ರಕಟಣೆಯಲ್ಲಿ, ‘ರಾಷ್ಟ್ರಪತಿಗಳ ಕಚೇರಿ ಮತ್ತು ನಿವಾಸವಾಗಿರುವ ರಾಷ್ಟ್ರಪತಿಭವನವು ದೇಶದ ಜನರ ಅಮೂಲ್ಯ ಪರಂಪರೆಯ ಸಂಕೇತವಾಗಿ, ರಾಷ್ಟ್ರಪತಿ ಭವನವನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ನಿರಂತರ ಪ್ರಯತ್ನಗಳು ನಡೆಯುತ್ತಿವೆ. ರಾಷ್ಟ್ರಪತಿ ಭವನದ ವಾತಾವರಣದಲ್ಲಿ ಭಾರತೀಯ ಸಾಂಸ್ಕೃತಿಕ ಮೌಲ್ಯಗಳು ಮತ್ತು ನೈತಿಕತೆಯನ್ನು ಪ್ರತಿಬಿಂಬಿಸುವ ನಿರಂತರ ಪ್ರಯತ್ನ ಸಾಗಿದೆ,’ ಎಂದು ತಿಳಿಸಿದೆ.
ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳಾದ ದರ್ಬಾರ್ ಹಾಲ್ ಮತ್ತು ಅಶೋಕ್ ಹಾಲ್‌ಗೆ ಕ್ರಮವಾಗಿ ‘ಗಣತಂತ್ರ ಮಂಟಪ’ ‘ಅಶೋಕ ಮಂಟಪ’ವೆಂದು ಮರುನಾಮಕರಣ ಮಾಡಿರುವುದಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ ಎಂದೂ ಪ್ರಕಟಣೆ ತಿಳಿಸಿದೆ.
ರಾಷ್ಟ್ರ ಪ್ರಶಸ್ತಿಗಳ ಪ್ರದಾನ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳನ್ನು ದರ್ಬಾಲ್ ಹಾಲ್‌ನಲ್ಲಿ ಆಯೋಜಿಸಲಾಗುತ್ತಿತ್ತು.