Saturday, May 4, 2024
Homeರಾಜಕೀಯಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 23 ಹಿಂದೂ ಕಾರ್ಯಕರ್ತರ ಹತ್ಯೆಗಳಾಗಿವೆ ನೆನಪಿಸಿಕೊಳ್ಳಿ- ಕಾಂಗ್ರೆಸ್ ಹೇಳಿಕೆಗೆ ಕೋಟಾ ಶ್ರೀನಿವಾಸ್...

ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 23 ಹಿಂದೂ ಕಾರ್ಯಕರ್ತರ ಹತ್ಯೆಗಳಾಗಿವೆ ನೆನಪಿಸಿಕೊಳ್ಳಿ- ಕಾಂಗ್ರೆಸ್ ಹೇಳಿಕೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

spot_img
- Advertisement -
- Advertisement -

ಉಡುಪಿ: ಶಿವಮೊಗ್ಗದಲ್ಲಿ ಕೊಲೆಯಾದ ಭಜರಂಗದಳ ಕಾರ್ಯಕರ್ತ ಹರ್ಷನ‌ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸುವುದಿಲ್ಲ ಎಂಬ ಕೈ ನಾಯಕರೊಬ್ಬರ ಹೇಳಿಕೆಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿಯಲ್ಲಿ ಮಾ.2 ರ ಬುಧವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರದ್ದು ಬೇಜವಾಬ್ದಾರಿ ಹೇಳಿಕೆಯಾಗಿದ್ದು, “ನಮಗೆ ಟಿಕೆಟ್ ಕೊಡುವಂತೆ ಹೇಳಲು ಅವರು ಯಾರು?” ಎಂದು ಪ್ರಶ್ನಿಸಿದರು.

“ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 23 ಹಿಂದೂ ಕಾರ್ಯಕರ್ತರ ಹತ್ಯೆಗಳಾಗಿವೆ. ಅಂದು ಕಾಂಗ್ರೆಸಿಗರ ಹೇಳಿಕೆ ಏನಿತ್ತು ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ. ನೀವು ಮೂಲಭೂತವಾದಿ ಸಂಘಟನೆಯವರಿಗೆ ಬೆಂಬಲ ನೀಡಿ ಪೋಷಿಸಿದಿರಿ, ಅವರ ಕೇಸ್ ವಾಪಾಸು ಪಡೆದಿದ್ದರಿಂದಲೇ ಇವತ್ತು ಕೊಲೆ ಕೃತ್ಯ ನಡೆಯುತ್ತಿದೆ ಎಂಬುವುದು ನೆನಪಿರಲಿ” ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.

“ನಮ್ಮ ಸರಕಾರ ಹತ್ಯೆಯಾದ ಹರ್ಷನ ಕುಟುಂಬಕ್ಕೆ ಸಂಪೂರ್ಣ ನೆರವು ನೀಡಿದೆ” ಎಂದು ಇದೇ ವೇಳೆ ಸ್ಪಷ್ಟಪಡಿಸಿದರು. ಮುಂಬರುವ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಹರ್ಷನ ಸಹೋದರಿ ಅಶ್ವಿನಿಗೆ ಬಿಜೆಪಿ ಟಿಕೆಟ್ ನೀಡಿದರೆ ಕಾಂಗ್ರೆಸ್ ಕ್ಯಾಂಡಿಟೇಟ್ ಹಾಕುವುದಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಬಿಜೆಪಿಗೆ ಸವಾಲೊಡ್ಡಿದ್ದರು.

- Advertisement -
spot_img

Latest News

error: Content is protected !!