- Advertisement -
- Advertisement -
ಬೆಂಗಳೂರು : ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿನಲ್ಲಿರುವ ಶಾಸಕ ಮುನಿರತ್ನ ಅವರ ಮೇಲೆ ಮೊನ್ನೆ ಎಸ್ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು.
ಇದರ ಮಧ್ಯೆ ಕೆಲವು ಬಿಜೆಪಿ ಶಾಸಕರ ಎದೆಯಲ್ಲಿ ನಡುಕ ಹುಟ್ಟುವಂತಹ ಘಟನೆ ನಡೆದಿದೆ. ಶಾಸಕ ಮುನಿರತ್ನ ಅವರ ಮನೆಯಲ್ಲಿ ಪತ್ತೆಯಾದ ಲ್ಯಾಪ್‌ಟಾಪ್ ಮತ್ತು ಪೆನ್‌ಡ್ರೈವ್‌ನಲ್ಲಿ ಬಿಜೆಪಿ ಸೇರಿ ವಿವಿಧ ರಾಜಕೀಯ ನಾಯಕರ ಅಶ್ಲೀಲ ವಿಡಿಯೊ ಪತ್ತೆಯಾಗಿವೆ ಎನ್ನಲಾಗಿದೆ.
SIT ಅಧಿಕಾರಿಗಳು ಶಾಸಕ ಮುನಿರತ್ನ ಮನೆ ಮೇಲೆ ಸೆ.28ರಂದು ದಾಳಿ ನಡೆಸಿ, ಲ್ಯಾಪ್‌ಟಾಪ್ ಮತ್ತು ಪೆನ್‌ಡ್ರೈವ್ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಅವುಗಳನ್ನು ಪರಿಶೀಲನೆ ಮಾಡಿದ ವೇಳೆ ಹಲವು ಅಧಿಕಾರಿಗಳು ಹಾಗೂ ರಾಜಕಾರಣಿಗಳ ಖಾಸಗಿ ವಿಡಿಯೊಗಳು ಸಿಕ್ಕಿವೆ ಎನ್ನಲಾಗಿದೆ. ಹನಿಟ್ರ್ಯಾಪ್ ಮಾಡಲು ಈ ವಿಡಿಯೊಗಳನ್ನು ಚಿತ್ರೀಕರಣ ಮಾಡಿರಬಹುದು ಎಂದು ಶಂಕಿಸಲಾಗಿದೆ.
- Advertisement -