Friday, June 27, 2025
Homeಅಪರಾಧ'ಡಿ.ವಿ ಸದಾನಂದಗೌಡ'ರ ಎನ್ನಲಾದ ರಾಸಲೀಲೆ ವಿಡಿಯೋ ವೈರಲ್: ಪೊಲೀಸ್ ಆಯುಕ್ತರಿಗೆ ದೂರು

‘ಡಿ.ವಿ ಸದಾನಂದಗೌಡ’ರ ಎನ್ನಲಾದ ರಾಸಲೀಲೆ ವಿಡಿಯೋ ವೈರಲ್: ಪೊಲೀಸ್ ಆಯುಕ್ತರಿಗೆ ದೂರು

spot_img
- Advertisement -
- Advertisement -

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಡಿ ವಿ ಸದಾನಂದಗೌಡರದ್ದು ಎನ್ನಲಾದ ರಾಸಲೀಲೆ ವಿಡಿಯೋವೊಂದನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತಿದ್ದಂತೆ, ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗು ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ರಿಗೆ ದೂರು ನೀಡಿದ್ದಾರೆ.

‘ನನ್ನ ವಿರುದ್ಧ ಫ್ಯಾಬ್ರಿಕೇಟಡ್, ಫೇಕ್, ಮಿಶ್ರಿತ ವಿಡಿಯೋ ಒಂದನ್ನು ಮಾಡಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದೆ, ನನ್ನ ಇಮೇಜ್ ಹಾಳು ಮಾಡಲೆಂದು ಈ ವಿಡಿಯೋ ಹರಿಬಿಡಲಾಗಿದೆ’ ಎಂದು ಡಿವಿಎಸ್ ಆರೋಪಿಸಿದ್ದಾರೆ. ‘ವಿಡಿಯೋದಲ್ಲಿರುವ ವ್ಯಕ್ತಿ ನಾನಲ್ಲ, ಇಂಪರ್ಸೊನೇಷನ್ ಮೂಲಕ ಈ ವಿಡಿಯೋ ಸಿದ್ದಪಡಿಸಲಾಗಿದೆ. ಈ ವಿಡಿಯೋ ಒಬ್ಬರಿಂದ ಒಬ್ಬರಿಗೆ ಹೋಗುವ ಮುನ್ನ ಕ್ರಮ ಕೈಗೊಳ್ಳಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

ಈ ವಿಡಿಯೋ ಕುರಿತ ವ್ಯಾಪಕ ಟೀಕೆ, ರಾಜಕೀಯ ಪಕ್ಷಗಳ ಬೆಂಬಲಿಗರಿಂದ ಕಾಲೆಳೆತ-ಸಮರ್ಥನೆಯಂಥ ಪೋಸ್ಟ್​ಗಳೂ ಸೋಷಿಯಲ್ ಮೀಡಿಯಾದಲ್ಲಿ ಕಂಡುಬಂದಿವೆ. ಇನ್ನೊಂದೆಡೆ ಇದು ಫೇಕ್​ ವಿಡಿಯೋ, ತೇಜೋವಧೆ ಮಾಡಲು ಕಿಡಿಗೇಡಿಗಳು ಸೃಷ್ಟಿಸಿದ ವಿಡಿಯೋ ಎನ್ನುವ ವಾದಗಳೂ ಕೇಳಿಬಂದಿವೆ.

- Advertisement -
spot_img

Latest News

error: Content is protected !!